Publish Date: Fri, 07 Jun 2019 (12:05 IST)
Updated Date: Fri, 07 Jun 2019 (12:09 IST)
ಮೈಸೂರು : ಚಾಮುಂಡೇಶ್ವರಿ ಕ್ಷೇತ್ರದ ಮಾಜಿ ಶಾಸಕ ಎಂ.ಸತ್ಯನಾರಾಯಣ ಅವರು ಗುರುವಾರ ರಾತ್ರಿ ನಿಧನರಾಗಿದ್ದಾರೆ.
ಇವರಿಗೆ 74 ವರ್ಷ ವಯಸ್ಸಾಗಿದ್ದು, ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಇಲವಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 11.10ಕ್ಕೆ ಕೊನೆಯುಸಿರೆಳೆದಿದ್ದಾರೆ.
ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಸತ್ಯನಾರಾಯಣ ಅವರು 2008ರಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿದ್ದರು. ಇವರ ಅಂತ್ಯಕ್ರಿಯೆ ಶುಕ್ರವಾರ ನಡೆಯಲಿದೆ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.