Select Your Language

Notifications

webdunia
webdunia
webdunia
webdunia

ಮಾಜಿ ಶಾಸಕ ಎಂ.ಪಿ. ರವೀಂದ್ರ ನಿಧನ

ಮಾಜಿ ಶಾಸಕ ಎಂ.ಪಿ. ರವೀಂದ್ರ ನಿಧನ
ಬೆಂಗಳೂರು , ಶನಿವಾರ, 3 ನವೆಂಬರ್ 2018 (14:40 IST)
ಬೆಂಗಳೂರು : ಮಾಜಿ ಉಪ ಮುಖ್ಯಮಂತ್ರಿ ಎಂ.ಪಿ.ಪ್ರಕಾಶ್ ಅವರ  ಪುತ್ರ ಮಾಜಿ ಶಾಸಕ ಎಂ.ಪಿ. ರವೀಂದ್ರ ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ.


ಮೂರು ದಿನಗಳ ಹಿಂದೆ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ರವೀಂದ್ರ ಅವರನ್ನು ನಗರದ ವಿಕ್ರಮ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗಿನ ಜಾವ 3.30ಕ್ಕೆ ಕೊನೆಯುಸಿರೆಳೆದಿದ್ದಾರೆ.


ಇವರು ದಾವಣಗೆರೆಯ ಹರಪನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಗೆದ್ದು ಶಾಸಕರಾಗಿದ್ದರು. ಮಾಜಿ ಸಿಎಂ ಸಿದ್ದರಾಮಯ್ಯರ ಆಪ್ತ ವಲಯದಲ್ಲಿ ರವೀಂದ್ರ ಗುರುತಿಸಿಕೊಂಡಿದ್ದರು. ಎಂ.ಪಿ.ರವೀಂದ್ರರ ಅಂತ್ಯಕ್ರಿಯೆ ಭಾನುವಾರ ಮಧ್ಯಾಹ್ನ 12 ಗಂಟೆಗೆ ಹೂವಿನಹಡಗಲಿಯಲ್ಲಿ ನಡೆಯಲಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಅಕ್ಕಾ ರಮ್ಯಾಕ್ಕಾ ಬಾರಕ್ಕಾ... ಓಟ್ ಮಾಡಕ್ಕಾ...! ನಟಿ ರಮ್ಯಾಗೆ ಬಿಜೆಪಿ ಟಾಂಗ್