ಕಾಂಗ್ರೆಸ್ ದೇವೇಗೌಡರನ್ನ ಸೋಲಿಸೋ ಹುನ್ನಾರ ಮಾಡಿದ್ದಾರೆ- ಹೊಸ ಬಾಂಬ್ ಸಿಡಿಸಿದ ಮಾಜಿ ಶಾಸಕ ಸುರೇಶ್ ಗೌಡ

Webdunia
ಮಂಗಳವಾರ, 7 ಮೇ 2019 (14:32 IST)
ತುಮಕೂರು : ಸಮ್ಮಿಶ್ರ ಸರ್ಕಾರವನ್ನ ಬೀಳಿಸೋಕೆ ಕಾಂಗ್ರೆಸ್ ನವರೇ ಪ್ಲಾನ್ ಮಾಡಿದ್ದಾರೆ ಎಂದು ಮಾಜಿ ಶಾಸಕ ಸುರೇಶ್ ಗೌಡ ಹೊಸ ಬಾಂಬ್ ಸಿಡಿಸಿದ್ದಾರೆ.




ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡರು ಗೆದ್ದರೇ ಅವರ ಕುಟುಂಬದವರು ಬರುತ್ತಾರೆ ಅನ್ನೋ ಆತಂಕ ಇದೆ. ಹೀಗಾಗಿ ಮಂಡ್ಯ, ರಾಮನಗರದ ರೀತಿ ಆಗುತ್ತದೆ ಎಂದು ಕಾಂಗ್ರೆಸ್ ದೇವೇಗೌಡರನ್ನ ಸೋಲಿಸೋ ಹುನ್ನಾರ ಮಾಡಿದ್ದಾರೆ.

ನೂರಕ್ಕೆ ನೂರರಷ್ಟು ದೇವೇಗೌಡರನ್ನ ದಿಕ್ಕುತಪ್ಪಿಸಿದ್ದಾರೆ. ಆದ್ದರಿಂದ ಗ್ರಾಮಾಂತರ ಜೆಡಿಎಸ್ ಶಾಸಕ ಗೌರಿಶಂಕರ ದೇವೇಗೌಡರನ್ನ ಗೆಲ್ಲಿಸುವುದಕ್ಕೆ ಒಂದು ರೂಪಾಯಿ ಕೆಲಸ ಮಾಡಿಲ್ಲ. ಅಲ್ಲದೆ ಉಪಮುಖ್ಯಮಂತ್ರಿ ಪರಮೇಶ್ವರ್ ಕೂಡ ಎಲ್ಲೂ ಸಭೆ ಮಾಡಿ ಗೆಲ್ಲಿಸೋಕೆ ಶ್ರಮಿಸಿಲ್ಲ ಎಂದು ಹೇಳಿದ್ದಾರೆ.


ಅಲ್ಲದೇ ಸಮ್ಮಿಶ್ರ ಸರ್ಕಾರವನ್ನ ಬೀಳಿಸೋಕೆ ಕಾಂಗ್ರೆಸ್ ನವರೇ ಪ್ಲಾನ್ ಮಾಡಿದ್ದಾರೆ. ಲೋಕಸಭಾ ಚುನಾವಣೆಯ ಬಳಿಕ ಸಮ್ಮಿಶ್ರ ಸರ್ಕಾರ ಬೀಳೋದು ನೂರಕ್ಕೆ ನೂರು ಸತ್ಯ. ಫಲಿತಾಂಶ ಬಂದ ಬಳಿಕ ಯಾರು ಏನೇನು ಪ್ಲಾನ್ ಮಾಡಿದ್ದಾರೆ ಎಂದು ಗೊತ್ತಾಗುತ್ತದೆ. ಮೈಸೂರಿನಲ್ಲಿ ವಿಜಯ ಶಂಕರ್, ಮಂಡ್ಯದಲ್ಲಿ ನಿಖಿಲ್ ಸೋಲ್ತಾರೆ ಎಂದು ಅವರು ಭವಿಷ್ಯ ನುಡಿದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್, ವಿಜಯೇಂದ್ರ ಬಗ್ಗೆ ಬೆಚ್ಚಿಬೀಳುವ ಬಾಂಬ್ ಸಿಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

ಬ್ರೇಕ್ ಫಾಸ್ಟ್, ಡಿನ್ನರ್ ಮೀಟಿಂಗ್ ನಿಂದಲೇ ರಾಜ್ಯ ಕುಲಗೆಟ್ಟಿದೆ: ಬಿವೈ ವಿಜಯೇಂದ್ರ

ವೋಟ್ ಚೋರಿ ಚರಿತ್ರೆಯನ್ನೇ ಹೊಂದಿರುವ ಕಾಂಗ್ರೆಸ್ ಗೆ ಬಿಜೆಪಿ ಮೇಲೆ ಆರೋಪಿಸಲು ನೈತಿಕತೆಯಿಲ್ಲ: ಸಿಟಿ ರವಿ

ಹಿಂದೂಗಳ ಪವಿತ್ರ ಕಾರ್ತಿಕ ದೀಪಕ್ಕೆ ಅನುಮತಿ ನೀಡಿದ ಜಡ್ಜ್ ವಿರುದ್ಧ ಸಹಿ ಹಾಕಿದ ರಾಜ್ಯದ ಮೂವರು ಕೈ ಸಂಸದರು ಇವರೇ

ಡಿನ್ನರ್ ಮೀಟಿಂಗ್ ನಡುವೆ ಸಿಎಂ, ಡಿಸಿಎಂಗೆ ದೆಹಲಿ ಬುಲಾವ್

ಮುಂದಿನ ಸುದ್ದಿ
Show comments