Select Your Language

Notifications

webdunia
webdunia
webdunia
Thursday, 10 April 2025
webdunia

ಪ್ರಮೋದ್‌ ಮಧ್ವರಾಜ್‌, ಮಂಜುನಾಥ್‌, ವರ್ತೂರು ಪ್ರಕಾಶ್ ಬಿಜೆಪಿ ಸೇರ್ಪಡೆ

bjp bengaluru pramod madwaraj udupi
bengaluru , ಶನಿವಾರ, 7 ಮೇ 2022 (17:22 IST)
ಮಾಜಿ ಶಾಸಕರಾದ ಪ್ರಮೋದ್‌ ಮಧ್ವರಾಜ್‌ ಮತ್ತು ಮಂಜುನಾಥ್‌ ಗೌಡ ಸೇರಿದಂತೆ ಹಲವು ಮುಖಂಡರು ಇಂದು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಗೊಂಡರು.
ಉಡುಪಿಯ ಮಾಜಿ ಶಾಸಕ ಪ್ರಮೋದ್‌ ಮಧ್ವರಾಜ್‌, ಮಾಲೂರು ಮಾಜಿ ಶಾಸಕ ಮಂಜುನಾಥ್‌ ಗೌಡ ಹಾಗೂ ಮಾಜಿ ಐಆರ್‌ ಎಸ್‌ ಅಧಿಕಾರಿ ಲಕ್ಷ್ಮೀ ಅಶ್ವಿನ್‌ ಗೌಡ, ಮಾಜಿ ರಾಜ್ಯಸಭಾ ಸದಸ್ಯ ಕೆ.ವಿ. ಕೃಷ್ಣಮೂರ್ತಿ, ಮಾಜಿ ಶಾಸಕ ವರ್ತೂರು ಪ್ರಕಾಶ್‌ ಸೇರಿದಂತೆ ಹಲವರು ಸಿಎಂ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.
ಪ್ರಮೋದ್‌ ಮಧ್ವರಾಜ್‌ ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ ಬಿಜೆಪಿಗೆ ಸೇರ್ಪಡೆಗೊಂಡು ಅಚ್ಚರಿ ಮೂಡಿಸಿದ್ದಾರೆ.
ನಾನು ಪಕ್ಷದಲ್ಲಿ ಮುಂದುವರಿಯಲು ಅಸಾಧ್ಯ ಎಂದು ಭಾಸವಾಗಿದೆ. ನೀವು ನನಗೆ ಇತ್ತೀಚೆಗೆ ವಹಿಸಿದ ಜವಾಬ್ದಾರಿ ನಿಭಾಯಿಸಲು ಸಾಧ್ಯವಿಲ್ಲ. ಹಾಗಾಗಿ ಪಕ್ಷ ನನಗೆ ನೀಡಿದ ಹುದ್ದೆ ಹಾಗೂ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇವೆ ಎಂದು ರಾಜೀನಾಮೆ ಪತ್ರದಲ್ಲಿ ಪ್ರಮೋದ್‌ ಮಧ್ವರಾಜ್‌ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ನಾನು ತಗ್ಗೋ ಮಗನೇ ಅಲ್ಲ: ಯತ್ನಾಳ್‌ ತಿರುಗೇಟು