Select Your Language

Notifications

webdunia
webdunia
webdunia
webdunia

ಕುಮಾರಸ್ವಾಮಿಯನ್ನು ಟೀಕಿಸುವ ಭರದಲ್ಲಿ ನಾಲಿಗೆ ಹರಿಬಿಟ್ಟ ಮಾಜಿ ಸಂಸದ ಶಿವರಾಮೇಗೌಡ

Former MP LR Sivaramesh Gowda

Sampriya

ಮಂಡ್ಯ , ಭಾನುವಾರ, 27 ಅಕ್ಟೋಬರ್ 2024 (10:30 IST)
Photo Courtesy X
ಮಂಡ್ಯ: ಬಿಜೆಪಿ ಮುಖಂಡ, ಮಾಜಿ ಸಂಸದ ಎಲ್.​ಆರ್.​ ಶಿವರಾಮೇಶಗೌಡ ಅವರು ಕೇಂದ್ರ ಸಚಿವ ಹೆಚ್.​ಡಿ. ಕುಮಾರಸ್ವಾಮಿ ಅವರನ್ನು ಟೀಕಿಸುವ ಭರದಿಂದ ನಾಲಿಗೆ ಹರಿಬಿಟ್ಟಿದ್ದಾರೆ.

ಶಿವರಾಮೇಶಗೌಡ ಅವರು ಕಾಂಗ್ರೆಸ್​ ಸೇರುವ ನಿರ್ಧಾರ ಮಾಡಿದ್ದಾರೆ. ಈ ನಡುವೆ ಕೇಂದ್ರ ಸಚಿವ ಹೆಚ್​ಡಿಕೆ ಅವರ ವಿರುದ್ಧ ವಾಗ್ದಾಳಿ ನಡೆಸುವ ವೇಳೆ ಮಂಡ್ಯದವರೆಲ್ಲಾ ನರಸತ್ತವರು  ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ರಾಮನಗರದಿಂದ ಕುಮಾರಸ್ವಾಮಿಯನ್ನ ಓಡಿಸಿದ್ದಾರೆ. ಆದರೆ, ಮಂಡ್ಯದವರೆಲ್ಲಾ ನರಸತ್ತವರು ಎಂದು ಇಲ್ಲಿಗೆ ಬಂದಿದ್ದಾರೆ. ಜಿಲ್ಲೆಯ ಮುಖಂಡರು ಈಗಲಾದರೂ ಎಚ್ಚೆತ್ತುಕೊಳ್ಳಿ. ನಿಮ್ಮಲ್ಲೂ ಗಂಡಸರಿದ್ದಾರೆ, ಹಾಸನದಿಂದ ಕರೆತಂದು ಮಂಡ್ಯದಲ್ಲಿ ಗಂಡಸರು ಮಾಡುವ ಅಗತ್ಯವಿಲ್ಲ, ಗಂಡಸರಾಗ್ರಪ್ಪ, ಕೈಗೆ ಬಳೆ‌ ತೊಟ್ಟುಕೊಳ್ಳಬೇಡಿ ಎಂದು ಮಂಡ್ಯ ಜಿಲ್ಲೆಯ ಜನತೆಗೆ ಕರೆ‌ ಕೊಡುತ್ತಿದ್ದೇನೆ ಎಂದು ಹೇಳಿರುವುದು ವಿವಾದದ ಸ್ವರೂಪ ಪಡೆದಿದೆ.

ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದೇನೆ‌. ಯೋಗೇಶ್ವರ್ ರೀತಿ ನಾನೂ ಜಂಪಿಂಗ್ ಸ್ಟಾರ್‌‌. ಕಾಂಗ್ರೆಸ್ ಪಕ್ಷ ಸೇರಲು ನಿರ್ಧರಿಸಿದ್ದೇನೆ. ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಕಟ್ಟುವ ಉದ್ದೇಶದಿಂದ ಪಕ್ಷ ಸೇರಿದ್ದೆ ಎಂದರು.

ವಿಧಾನಸಭೆ ಸೋಲಿನ ಬಳಿಕ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಆಯ್ತು. ಆದರೆ, ಈಗ ಮಂಡ್ಯದಲ್ಲಿ ಬಿಜೆಪಿಯನ್ನ ಜೆಡಿಎಸ್‌ನವರು ಕತ್ತುಹಿಸುಕಿದರು. ಹೊಂದಾಣಿಕೆ ಬಳಿಕ ಬಿಜೆಪಿ ಪಕ್ಷದ ಉಸಿರುಗಟ್ಟಿಸಲಾಗಿದೆ ಎಂದು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಮುಂಬೈ: ಮೊಬೈಲ್‌ ಕದ್ದನೆಂಬ ಶಂಕೆಯಿಂದ ಯುವಕನ ಹತ್ಯೆ ಮಾಡಿದ ಗುಂಪು