ಕುಮಾರಸ್ವಾಮಿಯನ್ನು ಟೀಕಿಸುವ ಭರದಲ್ಲಿ ನಾಲಿಗೆ ಹರಿಬಿಟ್ಟ ಮಾಜಿ ಸಂಸದ ಶಿವರಾಮೇಗೌಡ

Sampriya
ಭಾನುವಾರ, 27 ಅಕ್ಟೋಬರ್ 2024 (10:30 IST)
Photo Courtesy X
ಮಂಡ್ಯ: ಬಿಜೆಪಿ ಮುಖಂಡ, ಮಾಜಿ ಸಂಸದ ಎಲ್.​ಆರ್.​ ಶಿವರಾಮೇಶಗೌಡ ಅವರು ಕೇಂದ್ರ ಸಚಿವ ಹೆಚ್.​ಡಿ. ಕುಮಾರಸ್ವಾಮಿ ಅವರನ್ನು ಟೀಕಿಸುವ ಭರದಿಂದ ನಾಲಿಗೆ ಹರಿಬಿಟ್ಟಿದ್ದಾರೆ.

ಶಿವರಾಮೇಶಗೌಡ ಅವರು ಕಾಂಗ್ರೆಸ್​ ಸೇರುವ ನಿರ್ಧಾರ ಮಾಡಿದ್ದಾರೆ. ಈ ನಡುವೆ ಕೇಂದ್ರ ಸಚಿವ ಹೆಚ್​ಡಿಕೆ ಅವರ ವಿರುದ್ಧ ವಾಗ್ದಾಳಿ ನಡೆಸುವ ವೇಳೆ ಮಂಡ್ಯದವರೆಲ್ಲಾ ನರಸತ್ತವರು  ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ರಾಮನಗರದಿಂದ ಕುಮಾರಸ್ವಾಮಿಯನ್ನ ಓಡಿಸಿದ್ದಾರೆ. ಆದರೆ, ಮಂಡ್ಯದವರೆಲ್ಲಾ ನರಸತ್ತವರು ಎಂದು ಇಲ್ಲಿಗೆ ಬಂದಿದ್ದಾರೆ. ಜಿಲ್ಲೆಯ ಮುಖಂಡರು ಈಗಲಾದರೂ ಎಚ್ಚೆತ್ತುಕೊಳ್ಳಿ. ನಿಮ್ಮಲ್ಲೂ ಗಂಡಸರಿದ್ದಾರೆ, ಹಾಸನದಿಂದ ಕರೆತಂದು ಮಂಡ್ಯದಲ್ಲಿ ಗಂಡಸರು ಮಾಡುವ ಅಗತ್ಯವಿಲ್ಲ, ಗಂಡಸರಾಗ್ರಪ್ಪ, ಕೈಗೆ ಬಳೆ‌ ತೊಟ್ಟುಕೊಳ್ಳಬೇಡಿ ಎಂದು ಮಂಡ್ಯ ಜಿಲ್ಲೆಯ ಜನತೆಗೆ ಕರೆ‌ ಕೊಡುತ್ತಿದ್ದೇನೆ ಎಂದು ಹೇಳಿರುವುದು ವಿವಾದದ ಸ್ವರೂಪ ಪಡೆದಿದೆ.

ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದೇನೆ‌. ಯೋಗೇಶ್ವರ್ ರೀತಿ ನಾನೂ ಜಂಪಿಂಗ್ ಸ್ಟಾರ್‌‌. ಕಾಂಗ್ರೆಸ್ ಪಕ್ಷ ಸೇರಲು ನಿರ್ಧರಿಸಿದ್ದೇನೆ. ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಕಟ್ಟುವ ಉದ್ದೇಶದಿಂದ ಪಕ್ಷ ಸೇರಿದ್ದೆ ಎಂದರು.

ವಿಧಾನಸಭೆ ಸೋಲಿನ ಬಳಿಕ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಆಯ್ತು. ಆದರೆ, ಈಗ ಮಂಡ್ಯದಲ್ಲಿ ಬಿಜೆಪಿಯನ್ನ ಜೆಡಿಎಸ್‌ನವರು ಕತ್ತುಹಿಸುಕಿದರು. ಹೊಂದಾಣಿಕೆ ಬಳಿಕ ಬಿಜೆಪಿ ಪಕ್ಷದ ಉಸಿರುಗಟ್ಟಿಸಲಾಗಿದೆ ಎಂದು ಹೇಳಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಪಕ್ಷದಿಂದ ಡಾ. ಅಂಬೇಡ್ಕರರ ಬಗ್ಗೆ ಮೊಸಳೆಕಣ್ಣೀರು: ವಿಜಯೇಂದ್ರ

ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಬೇಕು ಎಂದ ಕುಮಾರಸ್ವಾಮಿ: ಸಿದ್ದರಾಮಯ್ಯ ಹೇಳಿದ್ದೇನು

ಹಿಂದೂ ಧರ್ಮದಲ್ಲಿರುವ ಜಾತಿ ವ್ಯವಸ್ಥೆಯಿಂದ ರೋಸಿ ಅಂಬೇಡ್ಕರ್ ಬೌದ್ಧ ಧರ್ಮ ಸೇರಿದ್ದರು: ಸಿದ್ದರಾಮಯ್ಯ

ಶುಗರ್ ಲೆವೆಲ್ ಲೋ ಆದರೆ ತಕ್ಷಣವೇ ಏನು ಮಾಡಬೇಕು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments