ಲೋಕಸಭಾ ಚುನಾವಣೆ 2024ಕ್ಕೂ ಮುನ್ನ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಜೆಡಿಎಸ್-ಬಿಜೆಪಿ ಮೈತ್ರಿ ಬಗ್ಗೆ ಚರ್ಚೆ ಮಾಡಿ ಒಪ್ಪಂದ ಮಾಡಿಕೊಂಡಿದ್ದಾರೆ. ಈ ಮೈತ್ರಿ ಯಶಸ್ವಿಯೂ ಆಗಿದ್ದು, ಕ್ಷೇತ್ರಗಳ ಹಂಚಿಕೆಯ ಒಪ್ಪಂದವನ್ನೂ ಮಾಡಿಕೊಳ್ಳಲಾಗಿದೆ.ಈ ಮೂಲಕ ಕರ್ನಾಟಕ ರಾಜ್ಯದ ರಾಜಕಾರಣದಲ್ಲಿ ಲೋಕಸಭಾ ಚುನಾವಣೆಗೂ ಮುನ್ನ ಹೊಸದೊಂದು ತಿರುವು ಕಂಡುಬರ್ತಿದೆ. ಇನ್ನು ಮೈತ್ರಿ ಕುರಿತಂತೆ ದೆಹಲಿಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಸೆ.4ರಂದು ಸಂಜೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮನೆಯಲ್ಲಿಯೇ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಚರ್ಚೆ ಮಾಡಿದರು. ಈ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಯಪ್ರಕಾಶ್ ನಡ್ಡಾ ಕೂಡ ಹಾಜರಿದ್ದರು ಈ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಕರೆ ಮಾಡಿ ಮಾತನಾಡಿದ ದೇವೇಗೌಡರು ಮೈತ್ರಿ ಕುರಿತು ಖಚಿತ ಒಪ್ಪಂದ ಮಾಡಿಕೊಂಡಿದ್ದಾರೆಂದು ಹೇಳಲಾಗ್ತಿದೆ.