ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ: ವಾರದ ಬಳಿಕ ಆಸ್ಪತ್ರೆಯಿಂದ ಬಿಡುಗಡೆ

Sampriya
ಸೋಮವಾರ, 13 ಅಕ್ಟೋಬರ್ 2025 (14:33 IST)
ಬೆಂಗಳೂರು: ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರು ಚೇತರಿಸಿಕೊಂಡಿದ್ದು, ಸೋಮವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅವರ ಆರೋಗ್ಯದಲ್ಲಿ ಚೇತರಿಕೆಯಾಗಿದೆ. 

ಜ್ವರ ಹಾಗೂ ಮೂತ್ರದ ಸೋಂಕಿನ ಸಮಸ್ಯೆಯಿಂದ  ಬಳಲುತ್ತಿದ್ದ ದೇವೇಗೌಡರು ಚೇತರಿಸಿಕೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ಅವರು ಪದ್ಮನಾಭನಗರದ ಮನೆಯಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ ಎಂಉ ಮೂಲಗಳು ತಿಳಿಸಿವೆ.

ಚಳಿ ಜ್ವರ ಹಾಗೂ ಯೂರಿನ್ ಇನ್ಫೆಕ್ಷನ್ ಕಾರಣ ದೇವೇಗೌಡರನ್ನು ಅಕ್ಟೋಬರ್ 6 ರಂದು ರಾತ್ರಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರನಿಗಾ ಘಟಕದಲ್ಲಿ ದಾಖಲಿಸಿ ಡಾ ಸುದರ್ಶನ್ ಬಲ್ಲಾಳ್ ಅವರು ದೇವೇಗೌಡರಿಗೆ ಚಿಕಿತ್ಸೆ ನೀಡಿದ್ದಾರೆ. 

ಕಳೆದ ಒಂದು ವಾರದಿಂದ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ವೈದ್ಯರ ಸೂಚನೆ ಮೇರೆಗೆ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ. ಕೆಲ ದಿನಗಳ ಕಾಲ ಮನೆಯಲ್ಲೇ ಅವರು ವಿಶ್ರಾಂತಿ ಪಡೆಯಲಿದ್ದಾರೆ. ಬಿಸಿಲು, ಧೂಳಿರುವ ವಾತಾವರಣಕ್ಕೆ ಹೋಗದಂತೆ ಮತ್ತೆ ಸೋಂಕು ತಗಲದಂತೆ ಎಚ್ಚರ ವಹಿಸಬೇಕು ಎಂದು ವೈದ್ಯರು ಅವರಿಗೆ ಸಲಹೆ ನೀಡಿದ್ದಾರೆ.

ದೇವೇಗೌಡರ ನಿವಾಸಕ್ಕೆ ಬಿಜೆಪಿ  ನಾಯಕರ ಭೇಟಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ವಿಪಕ್ಷ ನಾಯಕ ಆರ್.ಅಶೋಕ್ ಸೇರಿದಂತೆ ಇನ್ನಿತರ ಬಿಜೆಪಿ ನಾಯಕರು ಆರೋಗ್ಯ ವಿಚಾರಿಸಿದ್ದಾರೆ.  <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನೊಂದಿಗೆ ಆಟವಾಡಲು ಬರಬೇಡಿ: ಕೇಂದ್ರದ ವಿರುದ್ಧ ಬ್ಯಾನರ್ಜಿ ಕಿಡಿ

ಈ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲ್ಲ: ಮಲ್ಲಿಕಾರ್ಜುನ ಖರ್ಗೆ ಹಿಂಗದಿದ್ಯಾಕೆ

ದೇಶದ ಎರಡನೇ ಅತಿದೊಡ್ಡ ಮೀನು ಉತ್ಪಾದನಾ ರಾಜ್ಯವಾಗಿ ಗುಜರಾತ್

ಶಾಸಕರ ಖರೀದಿಗೆ ಹಣವಿದೆ, ರೈತರ ಸಂಕಷ್ಟಕ್ಕಿಲ್ಲ: ಜಗದೀಶ್ ಶೆಟ್ಟರ್ ಆಕ್ರೋಶ

ತಾತ್ಕಾಲಿಕ ಸಿಎಂ ಬೇಡ, ರೈತರ ಸಮಸ್ಯೆಗೆ ಸ್ಪಂದಿಸುವ ಮುಖ್ಯಮಂತ್ರಿ ಬೇಕು: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments