Select Your Language

Notifications

webdunia
webdunia
webdunia
webdunia

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮಗೆ ಉಸಿರಾಟ ತೊಂದರೆ: ಆಸ್ಪತ್ರೆಗೆ ದಾಖಲು

Former Prime Minister HD Deve Gowda

Sampriya

ಬೆಂಗಳೂರು , ಗುರುವಾರ, 24 ಅಕ್ಟೋಬರ್ 2024 (15:40 IST)
Photo Courtesy X
ಬೆಂಗಳೂರು: ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರನ್ನು ದಿಢೀರ್ ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಸಿರಾಟದ ತೊಂದರೆ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲೆಯಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಚೆನ್ನಮ್ಮ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆ ಚೆನ್ನಮ್ಮ ಆರೋಗ್ಯ ವಿಚಾರಿಸಲು ಕುಟುಂಬ ಸದ್ಯಸ್ಯರು ಆಸ್ಪತ್ರೆಗೆ ದೌಡಾಯಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಹಾಗೂ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಆಸ್ಪತ್ರೆಗೆ ದೌಡಾಯಿಸಿ, ಚೆನ್ನಮ್ಮ ಅವರ ಆರೋಗ್ಯ ವಿಚಾರಿಸಿದ್ದಾರೆ.

ಚನ್ನಪಟ್ಟಣ ಟಿಕೆಟ್ ವಿಚಾರವಾಗಿ ಇಂದು ಬೆಳಿಗ್ಗೆ ಸಭೆ ನಡೆಸಬೇಕಿತ್ತು ಆದರೆ, ಚೆನ್ನಮ್ಮ ಅವರ ಅನಾರೋಗ್ಯ ಹಿನ್ನೆಲೆ ಸಭೆ ರದ್ದುಗೊಳಿಸಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಎಚ್ ಡಿ ಕುಮಾರಸ್ವಾಮಿಗೆ ಕಾರ್ಯಕರ್ತರ ಸಭೆ ಕರೆಯೋದು ಅಳೋದೇ ಕೆಲಸ