Select Your Language

Notifications

webdunia
webdunia
webdunia
Thursday, 10 April 2025
webdunia

2023 ರ ಸಾರ್ವತ್ರಿಕ ಚುನಾವಣೆಗೆ ಈಗಿನಿಂದಲೇ ಕೆಲಸ-ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

Former Prime Minister HD Deve Gowda
bangalore , ಗುರುವಾರ, 4 ನವೆಂಬರ್ 2021 (21:44 IST)
ಬೆಂಗಳೂರು: 2023 ರ ಸಾರ್ವತ್ರಿಕ ಚುನಾವಣೆಗೆ ನಾನು ಈಗಿನಿಂದಲೇ ಕೆಲಸ ಮಾಡಬೇಕೆಂದು ತೀರ್ಮಾನಿಸಿದ್ದೇನೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ದೀಪಾವಳಿ ಹಬ್ಬದ ಸಮಾರಂಭದಲ್ಲಿ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಲಕ್ಷ್ಮಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಉಪ ಚುನಾವಣೆ ಫಲಿತಾಂಶದ ಬಗ್ಗೆ ಚರ್ಚೆ ಬೇಡ. ಫಲಿತಾಂಶವನ್ನು ಸ್ವಾಗತಿಸುತ್ತೇವೆ. ಜನರ ತೀರ್ಮಾನದಂತೆ ನಡೆಯುತ್ತೇವೆ. ಪ್ರಾದೇಶಿಕ ಪಕ್ಷ ಉಳಿಸಲು ಕೆಲಸ ಮಾಡಲು ಹೇಳಿದರು.
ನಾನು ರಾಜಕೀಯವಾಗಿ ಬೆಳೆಸಿದ ಎಂ.ಸಿ. ಮನಗೂಳಿ ಅವರ ಮಗನನ್ನು ಕಾಂಗ್ರೆಸ್ ನವರು ಕರೆದುಕೊಂಡು ಹೋದರು. ಚುನಾವಣೆಗೂ ನಿಲ್ಲಿಸಿದ್ದರು. ಅವರಿಗೆ ಎಷ್ಟು ಮತ ಬಂದಿವೆ. ಎಷ್ಟು ಅಂತರದಲ್ಲಿ ಸೋತರು ಎಂದು ಕುಟುಕಿದರು.
ಕಾಂಗ್ರೆಸ್ ಉಪಚುನಾವಣೆಯಲ್ಲಿ ಒಂದು ಸ್ಥಾನ ಗೆದ್ದಿದ್ದಕ್ಕೆ ಬೀಗುತ್ತಿದೆ. ಆ ಪಕ್ಷದ ನಾಯಕರ ಬಗ್ಗೆ ನಾನು ಮಾತನಾಡಲ್ಲ. ಸಿದ್ದರಾಮಯ್ಯ ಅವರು ಪಕ್ಷದ ನಾಯಕರಾಗಿ ಅಭ್ಯರ್ಥಿಗಳನ್ನು ಗೆಲ್ಲಿಸಲು ಏನೇನು ಮಾಡಬೇಕೋ ಮಾಡುತ್ತಾರೆ. ನಾನು ನನ್ನದೇ ಆದ ಮಾರ್ಗದಲ್ಲಿ ಪಕ್ಷ ಕಟ್ಟುತ್ತೇನೆ ಎಂದರು.
ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ರಾಜ್ಯಾಧ್ಯಕ್ಷ ಹೆಚ್.ಕೆ. ಕುಮಾರಸ್ವಾಮಿ, ವಿಧಾನಪರಿಷತ್ ಸದಸ್ಯ ತಿಪ್ಪೇಸ್ವಾಮಿ ಸೇರಿದಂತೆ ಆಹಾರ ಸಭೆ ಮಾಡಿ ಚರ್ಚೆ ನಡೆಸಿದ್ದೇವೆ. ನ.8ರಿಂದ ಎರಡನೇ ಕಾರ್ಯಾಗಾರ. ಅದಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದರು.
ಮಾಜಿ ವಿಧಾನ ಪರಿಷತ್ ಸದಸ್ಯ ಟಿ.ಎ. ಶರವಣ ಸೇರಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಚಾಕೋಲೆಟ್ ಆಸೆ ತೋರಿಸಿ ಮಕ್ಕಳನ್ನು ಅಪಹರಿಸಲು ಖದೀಮರು ವಿಫಲ