Select Your Language

Notifications

webdunia
webdunia
webdunia
webdunia

ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ

ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ
bangalore , ಭಾನುವಾರ, 7 ನವೆಂಬರ್ 2021 (19:56 IST)
ಬೆಂಗಳೂರು: ನನಗೆ  ಕೇದಾರನಾಥದಲ್ಲಿ ಉದ್ಘಾಟಿಸಿದ ಶ್ರೀ ಆದಿಶಂಕರಾಚಾರ್ಯರ ಕಪ್ಪು ಕಲ್ಲಿನ ಸುಂದರ ಮೂರ್ತಿಯನ್ನು ನೋಡಬೇಕು ಅನಿಸಿದೆ. ಈ ಪವಿತ್ರ ಕ್ಷೇತ್ರವನ್ನು ಪುನರ್​ನಿರ್ಮಾಣ ಮಾಡುವಲ್ಲಿ ನೀವು ಕೈಗೊಂಡ ಕಾರ್ಯಗಳಿಗಾಗಿ ನಾನು ನಿಮಗೆ ಶುಭಾಶಯ ಕೋರುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್​.ಡಿ. ದೇವೇಗೌಡ ಪತ್ರದ ಮುಖೇನ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ತಿಳಿಸಿದ್ದಾರೆ.
ಈ ವಿಚಾರವನ್ನು ಅವರು ನ. 6 ಬರೆದ ಪತ್ರದಲ್ಲಿ ತಿಳಿಸಿದ್ದಾರೆ. 
ನಾನು ಕರ್ನಾಟಕದಲ್ಲಿನ ಚಿಕ್ಕಮಗಳೂರಿನ ಶ್ರೀ ಶೃಂಗೇರಿ ಶಾರದಾ ಪೀಠದ ಮತ್ತು ಶೃಂಗೇರಿ ಮಠದ ಭಕ್ತನಾಗಿದ್ದೇನೆ. ನಿಮಗೆ ತಿಳಿದಿರುವಂತೆ ಅದು ಶ್ರೀ ಶಂಕರಾಚಾರ್ಯರು ಸ್ಥಾಪಿಸಿದ ದೇಶದ ನಾಲ್ಕು ಕೇಂದ್ರಗಳಲ್ಲಿ ಒಂದಾಗಿದೆ ಎಂದು ದೇವೇಗೌಡರು ಬರೆದುಕೊಂಡಿದ್ದಾರೆ.
ಶೃಂಗೇರಿ ಮಠವು ಶತಮಾನಗಳಿಂದ, ವಿವಿಧ ರಾಜರ, ಆಡಳಿತಗಾರರ ಜೊತೆಗೆ ಧಾರ್ಮಿಕ ಕೇಂದ್ರವಾಗಿ ಒಗ್ಗೂಡಿಸಿಕೊಂಡು ನಡೆದಿರುವುದು ವಿಶೇಷ ಎಂದು ದೇವೇಗೌಡ ಶೃಂಗೇರಿ ಮಠದ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಒಡೆಯರ್, ಪೇಶ್ವ, ಕೆಳದಿ ಮತ್ತು ತಿರುವಾಂಕೂರು ಆಳ್ವಿಕೆಯು ಮಠದಿಂದ ಲಾಭಾಂಶ ಪಡೆದುಕೊಂಡಿವೆ. ಮೈಸೂರು ರಾಜರಾದ ಹೈದರ್ ಅಲಿ ಹಾಗೂ ಟಿಪ್ಪು ಸುಲ್ತಾನ್ ಮತ್ತು ಹೈದರಾಬಾದ್​ನ ನಿಜಾಮರು ಕೂಡ ಈ ಧಾರ್ಮಿಕ ಸ್ಥಳದಿಂದ ಒಳಿತನ್ನು ಪಡೆದಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಬಿಎಂಪಿ ಚುನಾವಣೆ ನವೆಂಬರ್ 8 ರಂದು ಕೈಗೆತ್ತಿಗೊಳ್ಳಲಿರುವ ಪಾಲಿಕೆ