Publish Date: Sat, 07 May 2022 (16:35 IST)
Updated Date: Sat, 07 May 2022 (16:38 IST)
ಉಡುಪಿಯ ಮಾಜಿ ಶಾಸಕ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಪ್ರಮೋದ್ ಮಧ್ವರಾಜ್ ತಮ್ಮ ರಾಜೀನಾಮೆ ಪತ್ರವನ್ನು ಕೆಪಿಸಿಸಿ ಅಧ್ಯಕ್ಷರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ನಾನು ಪಕ್ಷದಲ್ಲಿ ಮುಂದುವರಿಯಲು ಅಸಾಧ್ಯ ಎಂದು ಭಾಸವಾಗಿದೆ. ನೀವು ನನಗೆ ಇತ್ತೀಚೆಗೆ ವಹಿಸಿದ ಜವಾಬ್ದಾರಿ ನಿಭಾಯಿಸಲು ಸಾಧ್ಯವಿಲ್ಲ. ಹಾಗಾಗಿ ಪಕ್ಷ ನನಗೆ ನೀಡಿದ ಹುದ್ದೆ ಹಾಗೂ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇವೆ ಎಂದು ರಾಜೀನಾಮೆ ಪತ್ರದಲ್ಲಿ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.