ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಆಂಡ್ ಗ್ಯಾಂಗ್ ಪೈಕಿ ನಾಲ್ವರನ್ನು ತುಮಕೂರು ಜೈಲಿಗೆ ಶಿಫ್ಟ್ ಮಾಡಲು ಕೋರ್ಟ್ ಒಪ್ಪಿಗೆ ನೀಡಿದೆ.
 
 			
 
 			
					
			        							
								
																	ಪ್ರಕರಣದ ಆರೋಪಿಗಳ ಪೈಕಿ ನಾಲ್ವರು ಆರೋಪಿಗಳನ್ನು ಬೇರೆ ಜೈಲಿಗೆ ಸ್ಥಳಾಂತರಿಸಲು ಅವಕಾಶ ಕೊಡಬೇಕೆಂದು ಪೊಲೀಸರು ಕೋರ್ಟ್ ಗೆ ಮನವಿ ಸಲ್ಲಿಸಿದ್ದರು. ಇದಕ್ಕೆ ಆರೋಪಿಗಳ ಪರ ವಕೀಲರು ಆಕ್ಷೇಪ ಸಲ್ಲಿಸಿದ್ದರು. ಆದರೆ ವಿಶೇಷ ಅಭಿಯೋಜಕ ಪ್ರಸನ್ನಕುಮಾರ್ ಈ ವಿಚಾರದಲ್ಲಿ ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ.
ಪ್ರಕರಣದಲ್ಲಿ ಮೊದಲು ತಪ್ಪೊಪ್ಪಿಕೊಳ್ಳಲು ಬಂದಿದ್ದ ಮತ್ತು ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಕರೆತಂದಿದ್ದ ಆರೋಪಿಗಳಾದ ರವಿಶಂಕರ್, ನಿಖಿಲ್ ನಾಯಕ್, ಕೇಶವ ಮೂರ್ತಿ, ಕಾರ್ತಿಕ್ ಮೇಲೆ ಇತರೆ ಆರೋಪಿಗಳು ಹಲ್ಲೆ ನಡೆಸುವ ಸಾಧ್ಯತೆಯಿದೆ. ಹೀಗಾಗಿ ಭದ್ರತಾ ಕಾರಣಗಳಿಗೆ ಈ ನಾಲ್ವರು ಆರೋಪಿಗಳನ್ನು ಪ್ರತ್ಯೇಕ ಜೈಲಿನಲ್ಲಿರಿಸಬೇಕು ಎಂದು ಮನವಿ ಮಾಡಿದರು.
ಈ ಹಿನ್ನಲೆಯಲ್ಲಿ ಕೋರ್ಟ್ ಅವರನ್ನು ತುಮಕೂರು ಜೈಲಿಗೆ ವರ್ಗಾಯಿಸಲು ಒಪ್ಪಿಗೆ ನೀಡಿತು. ಉಳಿದೆಲ್ಲಾ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿರಲಿದ್ದಾರೆ.