Select Your Language

Notifications

webdunia
webdunia
webdunia
webdunia

ಬಸ್‌-ಕಾರು ಅಪಘಾತ, ದೇವಸ್ಥಾನಕ್ಕೆ ಹೋಗುತ್ತಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರಣ

Accident

Sampriya

ಗದಗ , ಭಾನುವಾರ, 18 ಆಗಸ್ಟ್ 2024 (11:33 IST)
ಗದಗ: ಸರ್ಕಾರಿ ಬಸ್ ಹಾಗೂ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೃತರನ್ನು ಹಾವೇರಿ ಮೂಲದ ರುದ್ರಪ್ಪ ಅಂಗಡಿ(55), ಪತ್ನಿ ರಾಜೇಶ್ವರಿ(45), ಮಗಳು ಐಶ್ವರ್ಯ (16), ಮಗ ವಿಜಯ(12) ದುರ್ದೈವಿಗಳು.

ಶ್ರಾವಣ ಮಾಸದ ನಿಮಿತ್ತ ಕಲ್ಲಾಪೂರ ಬಸವೇಶ್ವರ ದೇವಸ್ಥಾನಕ್ಕೆ ತೆರಳುವ ವೇಳೆ  ಈ ದುರ್ಘಟನೆ ಸಂಭವಿಸಿದೆ.

ಹೀಗಾಗಿ ಕಲ್ಲಾಪೂರ ಕಡೆಗೆ ಹೊರಟ್ಟಿದ್ದ ಕಾರು ಹಾಗೂ ಇಳಕಲ್ ನಿಂದ ಹುಬ್ಬಳ್ಳಿಗೆ ಹೊರಟಿದ್ದ ಸಾರಿಗೆ
ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ.

ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ನರಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನರಗುಂದ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ತುಂಗಭದ್ರಾ ಡ್ಯಾಮ್‌ಗೆ ಸ್ಟಾಪ್ ಲಾಗ್ ಗೇಟ್ ಅಳವಡಿಕೆ ಯಶಸ್ವಿ: ನಿಟ್ಟುಸಿರು ಬಿಟ್ಟ ಲಕ್ಷಾಂತರ ರೈತರು