Publish Date: Sun, 23 Sep 2018 (18:15 IST)
Updated Date: Sun, 23 Sep 2018 (18:17 IST)
ಸಾಲಬಾಧೆ ತಾಳದೆ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಸುಂಕಾತೊಣ್ಣೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಸುಂಕಾತೊಣ್ಣೂರು ಗ್ರಾಮದ ನಂದೀಶ್ ಎಂಬಾತನ ಕುಟುಂಬ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದೆ.
ನಂದೀಶ್ (35), ಪತ್ನಿ ಕೋಮಲಾ (28), ಚಂದನ್ (10), ಮನು (13) ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ.
ಮಕ್ಕಳಿಗೆ ವಿಷ ಉಣಿಸಿ ಬಳಿಕ ತಾವು ವಿಷ ಕುಡಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸುಮಾರು ಐದು ಲಕ್ಷ ಸಾಲ ಮಾಡಿದ್ದ ಸತೀಶ್, ಎರಡು ಬಾರಿ ಜನತಾ ದರ್ಶನದಲ್ಲಿ ಸಿಎಂ ಭೇಟಿ ಮಾಡಿ ಮನವಿ ಸಲ್ಲಿಸಿದರೂ ಪ್ರಯೋಜನ ಆಗಿರಲಿಲ್ಲ. ಹೀಗಾಗಿ ಮನನೊಂದು ತಮ್ಮ ತೋಟದ ಮನೆಯಲ್ಲಿ ಆತ್ಮಹತ್ಯೆ ಗೆ ಶರಣಾಗಿದ್ದಾರೆ. ಈ ಕುರಿತು ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.