ಶಿವಮೊಗ್ಗ : ಮಹಾಮಾರಿ ಮಂಗನಕಾಯಿಲೆಗೆ ನಾಲ್ವರು ಬಲಿಯಾಗಿದ್ದು, 50ಕ್ಕೂ ಹೆಚ್ಚು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬುದಾಗಿ ತಿಳಿದುಬಂದಿದೆ.
ಸಾಗರದ ಮಂಡವಳ್ಳಿಯ ಪಾರ್ಶ್ವನಾಥ ಜೈನ್(47), ವಾಟೆಮಕ್ಕಿಯ ಕೃಷ್ಣಪ್ಪ(54), ಕಂಚಿಕಾಯಿ ಮಂಜುನಾಥ್(24) ಮತ್ತು ತೀರ್ಥಹಳ್ಳಿಯ ಗಂಟೆ ಜನಗಲು ಗ್ರಾಮದ ಸುಂದರಿ ಎಂಬವರು ಈಗಾಗಲೇ ಮಹಾಮಾರಿ ಮಂಗನಕಾಯಿಲೆಯಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಇನ್ನು ಮಂಗನಕಾಯಿಲೆ ಹರಡದಂತೆ ಪ್ರತಿವರ್ಷ ಲಸಿಕೆ ಹಾಕಲಾಗುತ್ತಿತ್ತು. ಆದರೆ ಈ ಬಾರಿ ಲಸಿಕೆ ಹಾಕುವ ಮುನ್ನವೇ ನಾಲ್ವರು ಮೃತಪಟ್ಟಿರುವುದು ಜನರಲ್ಲಿ ಆತಂಕ ಮೂಡಿಸಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.