ಡೀಲ್ ಪ್ರಕರಣ: ಜನಾರ್ಧನ ರೆಡ್ಡಿ ಬಂಧನಕ್ಕೆ ನಾಲ್ಕು ತಂಡ ಶೋಧ

ಗುರುವಾರ, 8 ನವೆಂಬರ್ 2018 (18:19 IST)
ತಲೆ ಮರೆಸಿಕೊಂಡಿರುವ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಬಂಧನಕ್ಕೆ ಸಿಸಿಬಿಯ ನಾಲ್ಕು ಪೊಲೀಸರ ತಂಡಗಳು ಬಲೆ ಬೀಸಿವೆ.

ಬಹುಕೋಟಿ ಮೊತ್ತದ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿಗೆ ಸೇರಿದ ಬಳ್ಳಾರಿಯ ನಿವಾಸದ ಮೇಲೆ ಅಧಿಕಾರಿಗಳ ತಂಡ ದಾಳಿ ನಡೆಸಿ ತೀವ್ರ ಶೋಧ ನಡೆಸಿದೆ.

ಬೆಂಗಳೂರಿನ ಮನೆಯಲ್ಲಿ ದಾಳಿ ನಡೆಸಿದ ವೇಳೆ ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಡೀಲ್ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಜನಾರ್ಧನ ರೆಡ್ಡಿ ಪರಾರಿಯಾಗಿದ್ದು, ಈ ಸಂಬಂಧ ರೆಡ್ಡಿ ಪರ ವಕೀಲರು ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಸಲ್ಲಿಸಲು ಮುಂದಾಗಿದ್ದಾರೆ. ರೆಡ್ಡಿ ಅವರನ್ನು ಅನಗತ್ಯವಾಗಿ ಈ ಪ್ರಕರಣದಲ್ಲಿ ಸಿಲುಕಿಸುವ ಹುನ್ನಾರ ನಡೆದಿದೆ. ಈ ಸಂಬಂಧ ಕಾನೂನು ಹೋರಾಟ ನಡೆಸುವುದಾಗಿ ರೆಡ್ಡಿ ಪರ ವಕೀಲರು ಹೇಳಿದ್ದಾರೆ.


ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಗಡಿ ಜಿಲ್ಲೆಯಲ್ಲಿ ಟಿಪ್ಪು ಜಯಂತಿ ಪೂರ್ವ ಭಾವಿ ಸಭೆ