Select Your Language

Notifications

webdunia
webdunia
webdunia
webdunia

ನಾಲ್ಕು ಬಾರಿಯ ಶಾಸಕ, ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ಅನಾರೋಗ್ಯದಿಂದ ನಿಧನ

Former Minister Manohar Tehsildar

Sampriya

ಬೆಂಗಳೂರು , ಗುರುವಾರ, 21 ನವೆಂಬರ್ 2024 (14:48 IST)
Photo Courtesy X
ಬೆಂಗಳೂರು: 2015ರಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಬಕಾರಿ ಸಚಿವರಾಗಿದ್ದ ಮನೋಹರ್ ತಹಶೀಲ್ದಾರ್ ನಿಧನರಾಗಿದ್ದಾರೆ.  ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಅನಾರೋಗ್ಯದಿಂದ ಬಳಲುತ್ತಿದ್ದ ಹಾನಗಲ್ ಕ್ಷೇತ್ರದ ಮಾಜಿ ಶಾಸಕರೂ ಆಗಿರುವ ಅವರು 2023ರ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದ ಕಾರಣ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದರು. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದರು.

ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಇತ್ತೀಚಿಗೆ ಸಂಸದ ಬಸವರಾಜ ಬೊಮ್ಮಾಯಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯದ ಬಗ್ಗೆ ವಿಚಾರಣೆ ನಡೆಸಿದ್ದರು. ಇಂದು ಮಧ್ಯಾಹ್ನ ಮೃತದೇಹವನ್ನು ಹಾನಗಲ್ ಎನ್‌ಸಿಜೆಸಿ ಮಹಾವಿದ್ಯಾಲಯ ಅವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗುತ್ತದೆ.

ಬಳಿಕ ಹುಟ್ಟೂರಾದ ಅಕ್ಕಿಹೊಳಿ ಗ್ರಾಮದಲ್ಲಿರುವ ತೋಟದ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಸಲಾಗುತ್ತದೆ. ನಾಲ್ಕು ಜನ ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನ ಮನೋಹರ್ ತಹಶೀಲ್ದಾರ್ ಅಗಲಿದ್ದಾರೆ.

ಬಲಿಜ ಸಮುದಾಯಕ್ಕೆ ಸೇರಿದ್ದ ತಹಶೀಲ್ದಾರ್‌ 4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಹಿಂದೆ ಎಸ್‌.ಎಂ. ಕೃಷ್ಣ ಅವರು ಮುಖ್ಯಮಂತ್ರಿಗಳಾಗಿದ್ದ ವಿಧಾನಸಭೆ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. 1978ರಲ್ಲಿ ಮೊದಲ ಬಾರಿಗೆ ಹಾನಗಲ್‌ ವಿಧಾನಸಭೆ ಕ್ಷೇತ್ರದಿಂದ ಆಯ್ಕೆಯಾದ ಮನೋಹರ್‌ ತಹಶೀಲ್ದಾರ್‌ ಅವರು 1989, 1999, 2013 ಸೇರಿ 4 ಬಾರಿ ಗೆಲುವು ಸಾಧಿಸಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಬೆಳ್ಳಂಬೆಳಿಗ್ಗೆ ಭ್ರಷ್ಟರ ಬೇಟೆಯಾಡಿದ ಲೋಕಾಯುಕ್ತ ಪೊಲೀಸರು: 25 ಕಡೆಗಳಲ್ಲಿ ದಿಢೀರ್ ದಾಳಿ