Select Your Language

Notifications

webdunia
webdunia
webdunia
webdunia

ಶೈಕ್ಷಣಿಕ ಕ್ಯಾಂಪಸ್‍ಗೆ ಫ್ರಾನ್ಸ್ ಒಲವು : ಅಶ್ವಥ್ ನಾರಾಯಣ್

ಶೈಕ್ಷಣಿಕ ಕ್ಯಾಂಪಸ್‍ಗೆ ಫ್ರಾನ್ಸ್ ಒಲವು : ಅಶ್ವಥ್ ನಾರಾಯಣ್
ಬೆಂಗಳೂರು , ಗುರುವಾರ, 9 ಡಿಸೆಂಬರ್ 2021 (08:25 IST)
ಬೆಂಗಳೂರು : ಫ್ರಾನ್ಸ್ ಸರ್ಕಾರವು ರಾಜ್ಯದಲ್ಲಿ ಇಂಡೋ-ಫ್ರೆಂಚ್ ಶಿಕ್ಷಣ ಸಂಸ್ಥೆಯನ್ನು ಪ್ರಾರಂಭಿಸಲು ಉತ್ಸುಕವಾಗಿದ್ದು,
ಆರೋಗ್ಯ, ಇಂಡಸ್ಟ್ರಿ 4.0 ಮತ್ತು ಪರಿಸರ ವಿಜ್ಞಾನಕ್ಕೆ ಸಂಬಂಧಿಸಿದ ಅವಳಿ ಪದವಿ ನೀಡಲಿವೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ್ ಹೇಳಿದ್ದಾರೆ.
ಭಾರತದಲ್ಲಿ ಫ್ರಾನ್ಸ್ ದೇಶದ ನೂತನ ಕಾನ್ಸುಲ್ ಜನರಲ್ ಆಗಿ ನೇಮಕಗೊಂಡಿರುವ ಥಿಯರಿ ಬರ್ತೆಲೋಟ್ ಅವರು ಬುಧವಾರ ತಮ್ಮನ್ನು ಭೇಟಿಯಾದಾಗ ಈ ಸಂಬಂಧ ಅವರು ಈ ಕುರಿತು ಮಾತುಕತೆ ನಡೆಸಿದರು.
ಈ ಕ್ಯಾಂಪಸ್ನ್ನು ಆರಂಭಿಸಲು ಬೆಂಗಳೂರು ನಗರ ವಿಶ್ವವಿದ್ಯಾಲಯವು ಸೂಕ್ತವಾಗಿದೆ ಎಂದು ಫ್ರೆಂಚ್ ನಿಯೋಗಕ್ಕೆ ತಿಳಿಸಲಾಗಿದೆ ಎಂದರು.  ನಂತರ ಮಾತನಾಡಿದ ಅವರು, ಆರೋಗ್ಯ ಕ್ಷೇತ್ರದಲ್ಲಿ ಜೈವಿಕ ತಂತ್ರಜ್ಞಾನ, ಕೃತಕ ಬುದ್ಧಿ ಮತ್ತೆ, ಔಷಧಗಳು ಮತ್ತು ಆರೋಗ್ಯ ಉತ್ಪನ್ನಗಳು, ಔಷಧ ವಿಜ್ಞಾನ ನಿರ್ವಹಣೆ,
ಸುಧಾರಿತ ಫಾರ್ಮಸುಟಿಕಲ್ ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ, ಇಂಡಸ್ಟ್ರಿ 4.0 ಅಡಿಯಲ್ಲಿ ಸೈಬರ್ ಸೆಕ್ಯುರಿಟಿ, ಡೇಟಾ ಅನಲಿಟಿಕ್ಸ್, ಮಶೀನ್ ಲರ್ನಿಂಗ್ ಮತ್ತು ಪರಿಸರ ಶಾಸ್ತ್ರದಲ್ಲಿ ಜೀವವೈವಿಧ್ಯ, ಹವಾಮಾನ ಬದಲಾವಣೆ, ಪರಿಸರಸ್ನೇಹಿ ಆರ್ಥಿಕತೆ ವಿಭಾಗಗಳಲ್ಲಿ ಉದ್ದೇಶಿತ ಕ್ಯಾಂಪಸ್ನಲ್ಲಿ ಅವಳಿ ಪದವಿ (ಇಂಡೋ-ಫ್ರೆಂಚ್ ಡಿಗ್ರಿ)ಗಳನ್ನು ನೀಡಲಾಗುವುದು ಎಂದು ವಿವರಿಸಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಬಾಲಕಿಗೆ ತಿಂಡಿ ಆಸೆ ತೋರಿಸಿ ಲೈಂಗಿಕ ದೌರ್ಜನ್ಯ !