ಕಾಂಗ್ರೆಸ್‌ ಮುಖಂಡೆಯ ಸೋಗಿನಲ್ಲಿ ವಂಚನೆ!

geetha
ಸೋಮವಾರ, 29 ಜನವರಿ 2024 (21:17 IST)
ಕಾಂಗ್ರೆಸ್‌ ಮುಖಂಡೆ
ಬೆಂಗಳೂರು : ತಾನು ಕಾಂಗ್ರೆಸ್‌ ಮುಖಂಡೆ ಎಂದು ಹೇಳಿಕೊಂಡು ಕೆಲಸ ಕೊಡಿಸುವುದಾಗಿ ಆಮಿಷ ತೋರಿಸಿ ಲಕ್ಷಾಂತರ ರೂ. ವಂಚನೆ ನಡೆಸಿರುವ ಪ್ರಕರಣ ಜಯನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರೂಪ ಮತ್ತಿತರರು ನೀಡಿದ ದೂರಿನ ಮೇರೆಗೆ ಆರೋಪಿ ಸಂದ್ಯಾ ಪವಿತ್ರಾ ನಾಗರಾಜ್‌ ಎಂಬುವವರ ವಿರುದ್ದ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. 

ರೂಪ ಎಂಬ ಮಹಿಳೆ ತಮ್ಮ ಸೋದರನಿಗೆ ಸರ್ಕಾರಿ ನೌಕರಿ ಕೊಡಿಸಲು ಪ್ರಯತ್ನಿಸುತ್ತಿದ್ದರು. ಈ ವೇಳೆ ಅವರಿಗೆ ಹರೀಶ್‌ ಮತ್ತು ಭಾನುಪ್ರಕಾಶ್‌ ಎಂಬ ವ್ಯಕ್ತಿಗಳ ಮೂಲಕ ಸಂಧ್ಯಾ ಪವಿತ್ರಾ ಪರಿಚಿತಳಾಗಿದ್ದಳು. ಹಂತಹಂತವಾಗಿ ರೂಪ ಅವರಿಂದ 11.20 ಲಕ್ಷ ರೂ. ಹಣ ಪಡೆದಿದ್ದ ಸಂಧ್ಯಾ ತಂಡ, ಬಳಿಕ ತಲೆ ಮರೆಸಿಕೊಂಡಿತ್ತು. 
 
ಈ ಬಗ್ಗೆ ರೂಪ ಜಯನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದಾಗ ಠಾಣೆಗೆ ಹಾಜರಾಗಿ ಹಣ ಹಿಂದಿರುಗಿಸುವುದಾಗಿ ಮುಚ್ಚಳಿಕೆ ಮತ್ತು ಚೆಕ್‌ ಬರೆದುಕೊಟ್ಟಿದ್ದರು. ಆದರೆ ಈಗ ಚೆಕ್‌ ಬ್ಯಾಂಕ್‌ ನಿಂದ ತಿರಸ್ಕೃತಗೊಂಡಿದ್ದರೆ, ಸಂಧ್ಯಾ ಕಾನೂನು ಮಖಾಂತರವೇ ಬಗೆಹರಿಸಿಕೊಳ್ಳಿ ಎಂದು ಧಮಕಿ ಹಾಕಿದ್ದಾಳೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments