Select Your Language

Notifications

webdunia
webdunia
webdunia
webdunia

ಡಿಕೆ ಸುರೇಶ್‌ ಹೆಸರಿನಲ್ಲಿ ವಂಚನೆ: ಆರೋಪಿ ಐಶ್ವರ್ಯ ಗೌಡ, ಪತಿ ಅರೆಸ್ಟ್‌, ನಟ ಧರ್ಮಗೂ ಸಂಕಷ್ಟ

ಐಶ್ವರ್ಯಾ+ವರಾಹಿ ಗೋಲ್ಡ್

Sampriya

ಬೆಂಗಳೂರು , ಶನಿವಾರ, 28 ಡಿಸೆಂಬರ್ 2024 (17:45 IST)
Photo Courtesy X
ಬೆಂಗಳೂರು: ಕಾಂಗ್ರೆಸ್ ಮಾಜಿ ಸಂಸದ ಡಿ.ಕೆ ಸುರೇಶ್ ಸಹೋದರಿ ಎಂದು ಹೇಳಿಕೊಂಡು  14.600 ಕೆಜಿಯಷ್ಟು ಚಿನ್ನಾಭರಣ ಖರೀದಿಸಿ ವಂಚನೆ ಮಾಡಿರುವ ಪ್ರಕರ ಸಂಬಂಧ ಐಶ್ವರ್ಯ ಗೌಡ ಹಾಗೂ ಪತಿ ಹರೀಶ್‌ರನ್ನು ಬಂಧಿಸಲಾಗಿದೆ.

ಆರ್.ಆರ್ ನಗರದ ನಿವಾಸಿ ಐಶ್ವರ್ಯಗೌಡ ಹಾಗೂ ಪತಿ ಹರೀಶ್ ಬಂಧಿತ ಆರೋಪಿಗಳು. ಅಲ್ಲದೇ ನಟ ಧಮೇಂದ್ರ ಅವರಿಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.

ಸದ್ಯ ಬಂಧಿತ ಐಶ್ವರ್ಯ ಗೌಡ, ಪತಿ ಹರೀಶ್‌ ಇಬ್ಬರನ್ನೂ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ.

ವೈದ್ಯಕೀಯ ಪರೀಕ್ಷೆ ಮುಕ್ತಾಯಗೊಂಡ ಬಳಿಕ 4ನೇ ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಲಿದ್ದಾರೆ. ಐಶ್ವರ್ಯಗೌಡರನ್ನ ಕಸ್ಟಡಿಗೆ ನೀಡುವಂತೆ ಕೇಳಲು ರಿಮಾಂಡ್ ಅಪ್ಲಿಕೇಷನ್ ಸಹ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಏನಿದು ಪ್ರಕರಣ: ಐಶ್ವರ್ಯ ಗೌಡ ಕಳೆದ ಜನವರಿಯಿಂದ ಇಲ್ಲಿಯವರೆಗೂ ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಶಾಪ್‌ನಲ್ಲಿ 14 ಕೆಜಿ 600 ಗ್ರಾಂನಷ್ಟು ಚಿನ್ನಾಭರಣ ಖರೀದಿಸಿದ್ದಳು. ಹಣ ಕೊಡದೇ ಇದ್ದಾಗ ಡಿಕೆ ಸುರೇಶ್‌ ಕಡೆಯಿಂದ ಮಾಲೀಕರಿಗೆ ಕರೆ ಮಾಡಿಸುವುದಾಗಿ ಬೆದರಿಕೆ ಹಾಕಿದ್ದಾರೆ.

ಈ ವೇಳೆ ಸಿನಿಮಾ ನಟ ಧರ್ಮೇಂದ್ರ ಎಂಬುವವರಿಂದ ಐಶ್ವರ್ಯಗೌಡ ಕರೆ ಮಾಡಿಸಿ, ಬೆದರಿಕೆ ಹಾಕಿದ್ದಾರೆ ಅನ್ನೋ ಆರೋಪವೂ ಕೇಳಿಬಂದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಹೊಸ ವರ್ಷಚಾರಣೆಗೆ ದಿನಗಣನೆ: ಸಿಲಿಕಾನ್ ಸಿಟಿಯಲ್ಲಿ ಬಿಗಿ ಭದ್ರತೆ ಕೈಗೊಂಡ ಖಾಕಿ