Select Your Language

Notifications

webdunia
webdunia
webdunia
webdunia

ಮಹಿಳೆಯರಿಗೆ ಉಚಿತ ಪುರುಷರಿಗೆ ಅದರ ಹೊರೆ ಖಚಿತ: ಬಿವೈ ವಿಜಯೇಂದ್ರ ಆಕ್ರೋಶ

BJP President BY Vijayendra, KSRTC Bus Ticket Hike, Chief Minister Siddaramaiah

Sampriya

ಬೆಂಗಳೂರು , ಗುರುವಾರ, 2 ಜನವರಿ 2025 (19:44 IST)
ಬೆಂಗಳೂರು: ಮಹಿಳೆಯರಿಗೆ ಉಚಿತ ಪುರುಷರಿಗೆ ಅದರ ಹೊರೆ ಖಚಿತ ಎಂಬುದನ್ನು ಇದೀಗ ಶೇ 15% ಬಸ್ ಪ್ರಯಾಣ ದರ ಏರಿಸುವ ಮೂಲಕ ಸಾರಿಗೆ ವ್ಯವಸ್ಥೆ ಆಶ್ರಯಿಸಿರುವ ಜನರಿಗೆ ಬರೆ ಎಳೆದಿದ್ದೀರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಟೀಕಿಸಿದರು.

ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದ ಬಸ್ ಪ್ರಯಾಣ ದರಗಳನ್ನು ಶೇಕಡಾ 15ರಷ್ಟು ಏರಿಸಲು ಅನುಮೋದನೆ ನೀಡಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಎಕ್ಸ್‌ನಲ್ಲಿ ವಿಜಯೇಂದ್ರ ಬರೆದುಕೊಂಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಯಾವ ಮುಖವಿಟ್ಟುಕೊಂಡು ನೀವು ರಾಜ್ಯದ ಜನತೆಗೆ ಪಂಚಭಾಗ್ಯ ಯೋಜನೆಯನ್ನು ಕೊಟ್ಟಿದ್ದೇವೆ ಎಂದು ಜಂಬ ಕೊಚ್ಚಿಕೊಳ್ಳುತ್ತೀರಿ?  ಶಕ್ತಿ ಯೋಜನೆಗೆ ಹಣ ಒದಗಿಸಲು ವಿಫಲವಾಗಿರುವ ನೀವು ಸಾರಿಗೆ ಸಂಸ್ಥೆಯು ನಷ್ಟದ ಹಾದಿಯನ್ನು ತುಳಿಯಲು ಕಾರಣರಾಗಿದ್ದೀರಿ.

"ಮಹಿಳೆಯರಿಗೆ ಉಚಿತ ಪುರುಷರಿಗೆ ಅದರ ಹೊರೆ ಖಚಿತ" ಎಂಬುದನ್ನು ಇದೀಗ ಶೇ 15% ಬಸ್ ಪ್ರಯಾಣ ದರ ಏರಿಸುವ ಮೂಲಕ ಸಾರಿಗೆ ವ್ಯವಸ್ಥೆ ಆಶ್ರಯಿಸಿರುವ ಜನರಿಗೆ ಬರೆ ಎಳೆದಿದ್ದೀರಿ.
ಶಕ್ತಿ ಯೋಜನೆ  ಹೇಗಾಗಿದೆ ಎಂದರೆ 'ವಾಣಿಜ್ಯ ಉತ್ಪನ್ನಗಳ ಮಾರಾಟದ ಆಕರ್ಷಣೆಗೆ ಮಳಿಗೆಗಳಲ್ಲಿ Buy-1 Get-1 (ಒಂದು ಖರೀದಿಸಿದರೆ-ಒಂದು ಉಚಿತ) ಬೋರ್ಡ್ ಪ್ರದರ್ಶಿಸುವ ಮಾದರಿಯಲ್ಲಿ ರಾಜ್ಯದ ಜನರಿಗೆ ಟೋಪಿ ಹಾಕಲು ಹೊರಟಿದ್ದೀರಿ.

ಶೇ.15 ರಷ್ಟು ಸಾರಿಗೆ ದರ ಹೆಚ್ಚಳದ ಕಾಂಗ್ರೆಸ್ ಸರ್ಕಾರದ ನಿರ್ಧಾರ ಅವೈಜ್ಞಾನಿಕ ಹಾಗೂ ಜನವಿರೋಧಿಯಾಗಿದ್ದು ಇದನ್ನು ವಿರೋಧಿಸಿ ಬಿಜೆಪಿ ಜನರ ಪರ ದನಿ ಎತ್ತಲಿದೆ ಎಂದು ಪೋಸ್ಟ್ ಹಾಕಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಹಿಳೆಯರಿಗೆ ₹2ಸಾವಿರ ನೀಡುವ ಬದಲು ಬದುಕಿಗೆ ಗ್ಯಾರಂಟಿ ನೀಡಲಿ: ಆರ್‌ ಅಶೋಕ್‌