ಬಡವರಿಗಾಗಿ ಸಿಎಂ ಯಡಿಯೂರಪ್ಪ ಸರ್ಕಾರದಿಂದ ಉಚಿತ ಸಾಮೂಹಿಕ ವಿವಾಹ

ಮಂಗಳವಾರ, 15 ಅಕ್ಟೋಬರ್ 2019 (11:41 IST)
ಬೆಂಗಳೂರು : ಆರ್ಥಿಕವಾಗಿ ಹಿಂದುಳಿದ ಬಡವರಿಗಾಗಿ ಸಿಎಂ ಯಡಿಯೂರಪ್ಪರವರ ಬಿಜೆಪಿ ಸರ್ಕಾರ ಉಚಿತ ಸಾಮೂಹಿಕ ವಿವಾಹ ಯೋಜನೆಯನ್ನು ಜಾರಿಗೆ ತರಲು ಮುಂದಾಗಿದೆ.
ಮುಜುರಾಯಿ ಇಲಾಖೆ ನೇತೃತ್ವದಲ್ಲಿ ಪ್ರತಿವರ್ಷ 10 ಸಾವಿರ ಉಚಿತ ಸಾಮೂಹಿಕ ಮದುವೆ ಮಾಡಿಸುವ ಯೋಜನೆಯಾಗಿದ್ದು, ಎಲ್ಲಾ ವರ್ಗದ ಬಡವರಿಗೆ ಹಿಂದೂ ಸಂಪ್ರದಾಯದಂತೆ ವಿವಾಹ ನಡೆಯಲಿದೆ. ಮುಜುರಾಯಿ ಇಲಾಖೆಗೆ ಸೇರಿದ  ಎ ದರ್ಜೆಯ 100 ದೇವಾಲಯಗಳಲ್ಲಿ  ಈ ಸಾಮೂಹಿಕ ವಿವಾಹವನ್ನು ನಡೆಸಲು ನಿರ್ಧರಿಸಲಾಗಿದೆ.


ಹಾಗೇಯೇ ವಧು-ವರರಿಗೆ ವಸ್ತ್ರ, ಮಾಂಗಲ್ಯ, ಆರ್ಥಿಕ ಸಹಾಯ ಸರ್ಕಾರವೇ ಮಾಡಲಿದೆ ಎನ್ನಲಾಗಿದೆ. ಮುಂದಿನ ವರ್ಷವೇ ಈ ಯೋಜನೆ ಜಾರಿಗೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಪ್ರಧಾನಿ ಮೋದಿ ಸೊಸೆಯನ್ನೇ ದರೋಡೆ ಮಾಡಿ ಸಿಕ್ಕಿಬಿದ್ದ ಖದೀಮರು!