Select Your Language

Notifications

webdunia
webdunia
webdunia
webdunia

ಮತದಾನ ಮಾಡಿದವರಿಗೆ ಹೊಟೇಲ್‌ಗಳಲ್ಲಿ ಉಚಿತ ಊಟ ನೀಡಲು ಹೈಕೋರ್ಟ್‌ ಅನುಮತಿ

High Court

Sampriya

ಬೆಂಗಳೂರು , ಬುಧವಾರ, 24 ಏಪ್ರಿಲ್ 2024 (19:14 IST)
Photo Courtesy X
ಬೆಂಗಳೂರು: ಇದೇ ಶುಕ್ರವಾರದಂದು ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ. ಈ ಹಿನ್ನೆಲೆ ಮತದಾನ ಪ್ರಮಾಣ ಹೆಚ್ಚಿಸುವ ಉದ್ದೇಶದಿಂದ ಮತದಾನ ಮಾಡಿದವರಿಗೆ ಉಚಿತವಾಗಿ ಆಹಾರ ನೀಡಲು ಕರ್ನಾಟಕ ಹೈಕೋರ್ಟ್‌ ಬೃಹತ್ ಬೆಂಗಳೂರು ಹೊಟೇಲ್ ಅಸೋಸಿಯೇಷನ್‌ ಸದಸ್ಯರಿಗೆ ಅನುಮತಿ ನೀಡಿದೆ.

ಉಚಿತ ಆಹಾರ ನೀಡಲು ಹೋಟೆಲ್​​ಗಳ ಸಂಘ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಮಧ್ಯಂತರ ಆದೇಶ ನೀಡಿದ್ದು, ನೀತಿ ಸಂಹಿತೆಯನ್ನು ಉಲ್ಲಂಘಿಸಬಾರದೆಂದು ತಿಳಿಸಿದೆ.

ಕಳೆದ ವಿಧಾನಸಭೆ ಚುನಾವಣೆ ವೇಳೆಯೂ ಮತದಾನ ಪ್ರಮಾಣ ಹೆಚ್ಚಿಸುವ ಉದ್ದೇಶದಿಂದ ಬೆಂಗಳೂರಿನ ಕೆಲವು ಹೋಟೆಲ್​ಗಳು  ಇದೇ ರೀತಿಯ ಪ್ರಯತ್ನ ಮಾಡಿದ್ದವು.

ಅರ್ಜಿದಾರರು ಕೋರ್ಟ್‌ಗ್ ಸಲ್ಲಿಸಿದ ಅರ್ಜಿಯಲ್ಲಿ ಬೆಂಗಳೂರು ನಗರ ಸೇರಿದಂತೆ ವಿವಿಧ ಕಡೆಗಳಲ್ಲಿ ಕಡಿಮೆ ಮತದಾನವಾಗುತ್ತಿದೆ. ಮತದಾನದ ಪ್ರಮಾಣ ಹೆಚ್ಚಿಸುವ ಉದ್ದೇಶದಿಂದ ಉಚಿತ ಆಹಾರ ನೀಡಲು ನಿರ್ಧರಿಸಿದ್ದೇವೆ ಎಂದು ಹೇಳಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಡಿಕೆಶಿ ಆಪ್ತನ ಮನೆ ಮೇಲೆ ಐಟಿ ದಾಳಿ: ಕೈ ಕಾರ್ಯಕರ್ತರಿಂದ ಆಕ್ರೋಶ