Publish Date: Thu, 02 Jun 2022 (20:07 IST)
Updated Date: Thu, 02 Jun 2022 (20:11 IST)
ಜೂನ್ 5 ರಂದು ನಡೆಯುವ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಬಿಬಿಎಂಪಿ ಅರಣ್ಯ ವಿಭಾಗದ ಸಸ್ಯಕ್ಷೇತ್ರಗಳಿಂದ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳಿಗೆ ಉಚಿತವಾಗಿ ಸಸಿಗಳನ್ನು ವಿತರಿಸಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ಉಪ ಅರಣ್ಯ ಸಂರಕ್ಷಣಾಧಿಕಾರಿಗೆ ನಿರ್ದೇಶನ ನೀಡಿದ್ದಾರೆ. ಪಾಲಿಕೆಯ ಅರಣ್ಯ ವಿಭಾಗದ ವಿವಿಧ ವಲಯಗಳ ವ್ಯಾಪ್ತಿಯಲ್ಲಿರುವ ಸಸ್ಯಕ್ಷೇತ್ರಗಳಲ್ಲಿ “8X12” ಅಳತೆಯ ವಿವಿಧ ಜಾತಿಯ ಸಸಿಗಳು ಲಭ್ಯವಿದ್ದು, “ವಿಶ್ವ ಪರಿಸರ ದಿನಾಚರಣೆ” ಅಂಗವಾಗಿ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳಿಗೆ ಉಚಿತವಾಗಿ ಸಸಿಗಳನ್ನು ವಿತರಿಸಲಾಗುವುದು. ಈ ಸಂಬಂಧ ಆಸಕ್ತರು ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಪತ್ರಗಳನ್ನು ಸಲ್ಲಿಸಿ ಉಚಿತವಾಗಿ ಸಸಿಗಳನ್ನು ಪಡೆದುಕೊಂಡು ಸಸಿಗಳನ್ನು ನೆಟ್ಟು ಪೋಷಣೆ ಮಾಡಬಹುದೆಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಸಾರ್ವಜನಿಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.