Publish Date: Sun, 26 Mar 2023 (14:00 IST)
Updated Date: Sun, 26 Mar 2023 (13:54 IST)
ಎಸ್ಎಸ್ಎಲ್ಸಿ ಪರೀಕ್ಷೆ ಹಿನ್ನೆಲೆ ವಿದ್ಯಾರ್ಥಿಗಳಿಗೆ ಬಿಎಂಟಿಸಿ ನಲ್ಲಿ ಉಚಿತ ಪ್ರಯಾಣಕ್ಕೆ ಬಿಎಂಟಿಸಿ ಸಂಸ್ಥೆ ವ್ಯವಸ್ಥೆ ಮಾಡಿದೆ.ಮಾರ್ಚ್ 31ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭವಾಗಲಿದೆ.ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಎಸ್ಆರ್ಟಿಸಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿತ್ತು .ಇದೀಗ ಬಿಎಂಟಿಸಿಯಲ್ಲೂ ಉಚಿತ ಪ್ರಯಾಣದ ಅವಕಾಶ ಕಲ್ಪಿಸಲಾಗಿದೆ.ಮಾರ್ಚ್ 31 ರಿಂದ ಏಪ್ರಿಲ್ 15 ರವರೆಗೆ ಪರೀಕ್ಷಾ ಹಾಲ್ ಟಿಕೆಟ್ ತೋರಿಸುವ ಮೂಲಕ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಬಹುದು.ಬೇಡಿಕೆಯ ಆಧಾರದ ಮೇಲೆ ಹೆಚ್ಚುವರಿ ಟ್ರಿಪ್‌ಗಳನ್ನು ನಿರ್ವಹಿಸುವ ವ್ಯವಸ್ಥೆ ಯನ್ನು ಸಹ ಬಿಎಂಟಿಸಿ ಸಂಸ್ಥೆ ಕಲ್ಪಿಸಲಿದೆ.