ಬೆಂಗಳೂರು: ಮಾರ್ಚ್ 1ರಿಂದ 22ರವರೆಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದೆ. ಈ ವೇಳೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಕೊಟ್ಟಿದೆ.ಮಾರ್ಚ್ 1ರಿಂದ 22ರವರೆಗೂ ಪರೀಕ್ಷೆಗಳು ನಡೆಯುವ ದಿನಾಂಕಗಳಂದು ಪರೀಕ್ಷೆಗೆ ಹಾಜರಾಗಲು ವಾಸಸ್ಥಳಗಳಿಂದ ನಿಯೋಜಿತ ಪರೀಕ್ಷೆ ಕೇಂದ್ರದವರೆಗೂ ಹೋಗುವಾಗ ಮತ್ತು ಹಿಂದಿರುಗುವಾಗ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ಉಚಿತವಾಗಿ ಪ್ರಯಾಣಿಸಲು ಅವಕಾಶ ವಿದ್ಯಾರ್ಥಿಗಳಿಗೆ ಕಲ್ಪಿಸಲಾಗಿದೆ.
ಹತ್ತನೇ ತರಗತಿ ಮತ್ತು ದ್ವಿತೀಯ ಪಿಯುಸಿಯಲ್ಲಿ ವಿದ್ಯಾರ್ಥಿಗಳು ಫೇಲ್ ಆದರೂ, ಪಾಸ್ ಆಗಿದ್ದರೂ ಅಂತಿಮ ಪರೀಕ್ಷೆ ಮಾದರಿಯಲ್ಲಿ 3 ಬಾರಿ ಪೂರಕ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ.ಅನುತ್ತೀರ್ಣರಾದ ಹಾಗೂ ಉನ್ನತ ಶಿಕ್ಷಣದಿಂದ ವಿದ್ಯಾರ್ಥಿಗಳು ವಂಚಿತರಾಗಬಾರದೆಂಬ ಉದ್ದೇಶದಿಂದ ಇದೇ ಮೊದಲ ಬಾರಿಗೆ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ 3 ಬಾರಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತಿದೆ.