Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಸ್ವಾತಂತ್ರ್ಯ ನಡಿಗೆ ಪಾದಯಾತ್ರೆ- ಪೊಲೀಸ್ ಅಧಿಕಾರಿಗೊಳೊಂದಿಗೆ ಸಭೆ..!

webdunia
ಮಂಗಳವಾರ, 9 ಆಗಸ್ಟ್ 2022 (21:14 IST)
ಆಗಸ್ಟ್ 15ರ ಸ್ವಾತಂತ್ರ್ಯ ನಡಿಗೆ ಪಾದಯಾತ್ರೆ, ಹಮ್ಮಿ ಕೊಂಡಿರುವ ಕಾಂಗ್ರೆಸ್  ಇಂದು ಪಾದಯಾತ್ರೆ ನಗರದಲ್ಲಿ ಯಾವ  ಮಾರ್ಗದಲ್ಲಿ ಸಾಗುತ್ತೆ ಎಂದು ಕೈ ನಾಯಕರು ಕೆಪಿಸಿಸಿ ಕಚೇರಿಯಲ್ಲಿ  ಪೊಲೀಸ್ ಅಧಿಕಾರಿಗಳೊಂದಿಗೆ  ಸಭೆ ನಡೆಸಿದರು. ನಂತರ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್  ಸಂಗೊಳ್ಳಿ ರಾಯಣ್ಣ ವೃತ್ತದಿಂದ ಕೆ.ಆರ್ ವೃತ್ತ, ಕಾರ್ಪೊರೇಷನ್, ಜೆ.ಸಿ ರಸ್ತೆ, ಮಿನರ್ವ ವೃತ್ತ ಮಾರ್ಗವಾಗಿ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದವರೆಗೆ ಸಾಗಲಿದೆ. ಈ ಮಾರ್ಗದ ಕುರಿತು ಪೊಲೀಸ್ ಆಯುಕ್ತರು ಹಾಗೂ ಇತರ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ. ಪಾದಯಾತ್ರೆ ನಂತರ ಸಂಜೆ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಹರಿಹರನ್ ಅವರ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶನಗೊಳ್ಳಲಿದೆ. ಇದು ಪಕ್ಷಾತೀತ ಕಾರ್ಯಕ್ರಮವಾಗಿದ್ದು, ಹಿಂದಿನ ದಿನ ಯೂತ್ ಕಾಂಗ್ರೆಸ್ ವತಿಯಿಂದ ಬೃಹತ್ ರಾಷ್ಟ್ರಧ್ವಜ ಪ್ರದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು 

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಬೊಮ್ಮಾಯಿಗೆ ಎರಡನೇ ಸುತ್ತಿನ ಕೋವಿಡ್ ಟೆಸ್ಟ್