Webdunia - Bharat's app for daily news and videos

Install App

ಮಂಡ್ಯದಿಂದ ಎಚ್‌ಡಿಕೆ ಕಣಕ್ಕೆ: ಜೆಡಿಎಸ್‌ ಅಭ್ಯರ್ಥಿಗಳ ಆಯ್ಕೆ ಫೈನಲ್, ಘೋಷಣೆಯಷ್ಟೇ ಬಾಕಿ

Sampriya
ಮಂಗಳವಾರ, 26 ಮಾರ್ಚ್ 2024 (16:53 IST)
ಬೆಂಗಳೂರು: ಬಿಜೆಪಿಯೊಂದಿಗೆ ಚುನಾವಣಾ ಪೂರ್ವ ಮೈತ್ರಿ ಘೋಷಿಸಿರುವ ಜೆಡಿಎಸ್​ ತನಗೆ ನೀಡಲಾಗಿರುವ ಮಂಡ್ಯ, ಕೋಲಾರ ಹಾಗೂ ಹಾಸನ ಲೋಕಸಭೆ ಕ್ಷೇತ್ರಗಳಿಂದ ಇದುವರೆಗೂ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ.

ಇನ್ನೂ ಟಿಕೆಟ್ ಹಂಚಿಕೆ ಸಂಬಂಧ ಜೆಡಿಎಸ್‌ನಲ್ಲಿ ಅಭ್ಯರ್ಥಿಗಳ ಆಯ್ಕೆ ಫೈನಲ್ ಆಗಿದೆ ಎನ್ನಲಾಗಿದೆ.

ಹಾಸನ ಲೋಕಸಭೆ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹಾಲಿ ಸಂಸದ ಪ್ರಜ್ವಲ್​ ರೇವಣ್ಣಗೆ ಟಿಕೆಟ್​
ಖಾತ್ರಿಯಾಗಿದೆ. ಕೋಲಾರ ಹಾಗೂ ಮಂಡ್ಯ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ದಳಪತಿಗಳಿಗೆ ಕಗ್ಗಂಟಾಗಿ ಉಳಿದಿದೆ. ಈ ಮೊದಲು ಮಾಜಿ ಸಚಿವ ಸಿ.ಎಸ್. ಪುಟ್ಟರಾಜು ಮಂಡ್ಯದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂದು ಹೇಳಲಾಗಿತ್ತು. ಆದರೆ, ಬದಲಾದ ರಾಜಕೀಯ ಸನ್ನಿವೇಶದಲ್ಲಿ ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಮಂಡ್ಯದಿಂದ ಕಣಕ್ಕಿಳಿಯುತ್ತಾರೆ ಎಂದು ಹೇಳಲಾಗಿದೆ.

ಈಗಾಗಲೇ ಸ್ಥಳೀಯ ನಾಯಕರ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿರುವ ಮಾಜಿ ಸಿಎಂ ಎಚ್​ಡಿಕೆ ಮುಖಂಡರಿಂದ ಅಭಿಪ್ರಾಯ ಸಂಗ್ರಹಿಸಿದ್ದಾರೆ. ನಿಖಿಲ್​ ಅಥವಾ ಕುಮಾರಸ್ವಾಮಿ ಇಬ್ಬರಲ್ಲೊಬ್ಬರು ಸ್ಪರ್ಧಿಸಿದರೆ ಮಂಡ್ಯದಲ್ಲಿ ಜೆಡಿಎಸ್​ ಗೆಲುವು ಖಚಿತ ಎನ್ನುವ ವಾತಾವರಣವಿದೆ. ಇನ್ನೂ ಮಂಡ್ಯದಿಂದ ಕುಮಾರಸ್ವಾಮಿ ಕಣಕ್ಕಿಳಿಯುವ ಸಾಧ್ಯತೆಯಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments