Publish Date: Fri, 22 Feb 2019 (14:37 IST)
Updated Date: Fri, 22 Feb 2019 (14:39 IST)
ಲೋಕಸಭೆಗೆ ಬಿಜೆಪಿ ಗಡಿಜಿಲ್ಲೆಯಿಂದ ಚುನಾವಣಾ ಪ್ರಚಾರ ಆರಂಭಿಸಿದೆ.
ಮೋದಿ ವಿಜಯ ಸಂಕಲ್ಪ ಯಾತ್ರೆ ಹೆಸರಿನಲ್ಲಿ ರಾಜ್ಯಾದ್ಯಂತ ಬಿಜೆಪಿ ಪ್ರವಾಸ ಹಮ್ಮಿಕೊಳ್ಳುತ್ತಿದೆ. ಬೀದರ್ ನಿಂದ ಇಂದು ಮೋದಿ ವಿಜಯಸಂಕಲ್ಪ ಯಾತ್ರೆ ಆರಂಭಿಸಲಿರುವ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪಗೆ ಪಕ್ಷದ ಪ್ರಮುಖರು ಸಾಥ್ ನೀಡಲಿದ್ದಾರೆ.
ಬೀದರ್ ಜಿಲ್ಲೆಯ ಹುಮ್ನಾಬಾದ್ ನ ರಾಮಚಂದ್ರಪ್ಪ ಕಾಲೇಜ್ ನಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.
ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಪುರುಷೋತ್ತಮ ರೂಪಾಲ, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಮಾಜಿ ಸಚಿವ ಆರ್. ಅಶೋಕ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ, ಕೆ.ಎಸ್. ಈಶ್ವರಪ್ಪ ಸೇರಿದಂತೆ ಅನೇಕರು ಭಾಗಿಯಾಗಲಿದ್ದಾರೆ.
ಲೊಕಸಭಾ ಚುನವಾಣಾ ಪ್ರಚಾರಕ್ಕೆ ಬೀದರ್ ನಿಂದಲೇ ಬಿಎಸ್ವೈ ಚಾಲನೆ ನೀಡುತ್ತಿದ್ದಾರೆ. ಕಾರ್ಯಕ್ರಮದಲ್ಲಿ 10 ಸಾವಿರಕ್ಕೂ ಅಧಿಕ ಜನ ಭಾಗಿಯಾಗಲಿದ್ದಾರೆ.