Select Your Language

Notifications

webdunia
webdunia
webdunia
webdunia

ಧರ್ಮದಿಂದ ರಾಜ್ಯಕ್ಕೆ ಹೊಡೆತ ಇಲ್ಲ: ಬೊಮ್ಮಾಯಿ

ಧರ್ಮದಿಂದ ರಾಜ್ಯಕ್ಕೆ ಹೊಡೆತ ಇಲ್ಲ: ಬೊಮ್ಮಾಯಿ
ಉಡುಪಿ , ಮಂಗಳವಾರ, 12 ಏಪ್ರಿಲ್ 2022 (08:44 IST)
ಉಡುಪಿ : ರಾಜ್ಯದಲ್ಲಿ ನಡೆಯುತ್ತಿರುವ ಧರ್ಮ ದಂಗಲ್ನಿಂದ ಕೈಗಾರಿಕೆಗಳಿಗೆ, ಹೊಸ ಉದ್ದಿಮೆಗಳಿಗೆ ಹಾಗೂ ಐಟಿ ಸೆಕ್ಟರ್ಗಳಿಗೆ ಹೊಡೆತ ಎಂಬ ಬಗ್ಗೆ ಚರ್ಚೆಯಾಗುತ್ತಿದೆ.

ಈ ವಿಚಾರಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಣಿಪಾಲದಲ್ಲಿ ಮಾತನಾಡಿ, ಪ್ರಸಕ್ತ ವಿದ್ಯಮಾನಗಳಿಂದ ಯಾವುದೇ ತೊಂದರೆ ಆಗಲ್ಲ ಎಂದಿದ್ದಾರೆ.

ರಾಜ್ಯದಲ್ಲಿ ಧರ್ಮ ಸಂಘರ್ಷದಿಂದ ಉದ್ದಿಮೆಗಳಿಗೆ ಹಿನ್ನಡೆ ಆಗುವುದಿಲ್ಲ. ಕೈಗಾರಿಕೆಗೆ ಸಮಸ್ಯೆಯಾಗುತ್ತದೆ ಎಂಬುದು ಸುಳ್ಳು. ರಾಜ್ಯದ ಪ್ರಸಕ್ತ ಬೆಳವಣಿಗೆಗಳಿಂದ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದು ಬೊಮ್ಮಾಯಿ ಪ್ರತಿಕ್ರಿಯೆ ನೀಡಿದರು. 

ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಸಿಎಂ, ಅತಿ ಹೆಚ್ಚು ಎಫ್ಡಿಐ ಹೂಡಿಕೆ ನಮ್ಮ ರಾಜ್ಯಕ್ಕೆ ಬರುತ್ತಿದೆ. ಈ ಕ್ವಾರ್ಟರ್ನಲ್ಲಿ ದೇಶದ ಶೇ.43 ರಷ್ಟು ಹೂಡಿಕೆ ನಮ್ಮ ರಾಜ್ಯಕ್ಕೆ ಬಂದಿದೆ. ಪ್ರಪಂಚದ ಮೂಲೆಮೂಲೆಗಳಿಂದ ಹೂಡಿಕೆದಾರರು ಬರುತ್ತಿದ್ದಾರೆ.

ಕೈಗಾರಿಕೆಗಳು ನಮ್ಮ ರಾಜ್ಯ ತೊರೆಯುವ ಪ್ರಶ್ನೆಯೇ ಇಲ್ಲ. ಕರ್ನಾಟಕದಲ್ಲಿ ಮಾನವ ಸಂಪನ್ಮೂಲ ಯಥೇಚ್ಛವಾಗಿದೆ. ಮೂಲಸೌಕರ್ಯದ ಗುಣಮಟ್ಟ ಬಹಳ ಚೆನ್ನಾಗಿದೆ. ದೇಶದ ಟಾಪ್ ಸಂಶೋಧನಾ ಮತ್ತು ಅಭಿವೃದ್ಧಿ ಕೇಂದ್ರಗಳು ನಮ್ಮಲ್ಲಿದೆ ಎಂದು ಸಿಎಂ ಹೇಳಿದರು. 

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಡೋಮ್ ಬಳಸಿದ್ದಕ್ಕಾಗಿ ಜಾಮೀನು ಕೊಟ್ಟ ಹೈಕೋರ್ಟ್!