Webdunia - Bharat's app for daily news and videos

Install App

ಗಡಿ ವಿಚಾರಣೆಯಿಂದ ನ್ಯಾ. ಬಿವಿ ನಾಗರತ್ನ ಹಿಂದಕ್ಕೆ

Webdunia
ಶುಕ್ರವಾರ, 10 ಫೆಬ್ರವರಿ 2023 (16:55 IST)
ಮಹತ್ವದ ಬೆಳವಣಿಗೆಯಲ್ಲಿ ಮಹಾರಾಷ್ಟ್ರ-ಕರ್ನಾಟಕ ರಾಜ್ಯಗಳ ನಡುವಿನ ಗಡಿ ವಿವಾದದ ವಿಚಾರಣೆಯಿಂದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿವಿ ನಾಗರತ್ನ ಅವರು ಬುಧವಾರ ಹಿಂದೆ ಸರಿದಿದ್ದಾರೆ. ಮಹಾರಾಷ್ಟ್ರ-ಕರ್ನಾಟಕ ರಾಜ್ಯಗಳ ನಡುವಿನ ಗಡಿ ವಿವಾದದ ವಿಚಾರಣೆಯ ಮೊಕದ್ದಮೆಯನ್ನು ನ್ಯಾಯಮೂರ್ತಿಗಳಾದ ಕೆಎಂ ಜೋಸೆಫ್, ಹೃಷಿಕೇಶ್ ರಾಯ್ ಮತ್ತು ಬಿವಿ ನಾಗರತ್ನ ಅವರ ಪೀಠದ ಮುಂದೆ ಪಟ್ಟಿ ಮಾಡಲಾಗಿದ್ದು, ರಾಜ್ಯ ಮರುಸಂಘಟನೆ ಕಾಯಿದೆ, 1956 ರ ಸೆಕ್ಷನ್ 3,7 ಮತ್ತು 8 ರ ಕೆಲವು ಭಾಗಗಳನ್ನು ಬಹಿರಂಗಪಡಿಸಲು ಕೋರಿ 2004 ರಲ್ಲಿ ಮಹಾರಾಷ್ಟ್ರ ಸರ್ಕಾರವು ಮೊಕದ್ದಮೆ ಹೂಡಿತ್ತು. ಈ ಕಾಯಿದೆಯು ಭಾಷಾವಾರು ರೀತಿಯಲ್ಲಿ ರಾಜ್ಯಗಳನ್ನು ಮರುಸಂಘಟಿಸಲು ಸಂಬಂಧಿಸಿದಾಗಿದ್ದು, ಕರ್ನಾಟಕದ ಐದು ಜಿಲ್ಲೆಗಳ 865 ಗ್ರಾಮಗಳು ಮತ್ತು ಸ್ಥಳಗಳು ಮರಾಠಿ ಮಾತನಾಡುವ ಜನರನ್ನು ಒಳಗೊಂಡಿವೆ.. ಹೀಗಾಗಿ ಬೆಳಗಾವಿ ಕರ್ನಾಟಕ ರಾಜ್ಯದ ಭಾಗವಾಗಿರಬಾರದು, ಬದಲಿಗೆ ಮಹಾರಾಷ್ಟ್ರದ ಭಾಗವಾಗಬೇಕು ಎಂದು ಮಹಾರಾಷ್ಟ್ರ ಸರ್ಕಾರವು  ತನ್ನ ಅರ್ಜಿಯಲ್ಲಿ ವಾದಿಸಿದೆ. ಎರಡು ರಾಜ್ಯಗಳ ರಾಜ್ಯ ಸರ್ಕಾರಗಳ ನಡುವಿನ ವಿವಾದವನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ಗೆ ಅಧಿಕಾರ ನೀಡುವ ಸಂವಿಧಾನದ 131 ನೇ ವಿಧಿಯನ್ನು ಉಲ್ಲೇಖಿಸಿದ ಮಹಾರಾಷ್ಟ್ರ ಸರ್ಕಾರವು ಕೇಂದ್ರ ಸರ್ಕಾರ ಮತ್ತು ರಾಜ್ಯಗಳು ಭಾಗಿಯಾಗಿರುವ ವಿವಾದಗಳ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್‌ಗೆ ನ್ಯಾಯವ್ಯಾಪ್ತಿ ಇದೆ ಎಂದು ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments