ಆಗಸ್ಟ್ 5 ರಿಂದ 15 ರವರೆಗೆ ನಡೆಯಲಿರುವ ಫಲಪುಷ್ಪ ಪ್ರದರ್ಶನ

Webdunia
ಬುಧವಾರ, 3 ಆಗಸ್ಟ್ 2022 (16:06 IST)
ಆಗಸ್ಟ್ 5ರಿಂದ 15ರವರೆಗೆ ನಗರದ ಪ್ರತಿಷ್ಠಿತ ಲಾಲ್ಬಾಗ್ ಫಲಪುಷ್ಪ ಪ್ರದರ್ಶನ ನಡೆಯಲಿದೆ ಎಂದು ತೋಟಗಾರಿಕೆ ಸಚಿವ ಮುನಿರತ್ನ ತಿಳಿಸಿದರು. ಕೊವಿಡ್ ಸಾಂಕ್ರಾಮಿಕದ ಕಾರಣದಿಂದ ಕಳೆದ ಎರಡು ವರ್ಷಗಳಿಂದ ಫಲ ಪುಷ್ಪ ಪ್ರದರ್ಶನ ಸ್ಥಗಿತಗೊಂಡಿತ್ತು. ಈ ವರ್ಷದಿಂದ ಮತ್ತೆ ಆರಂಭವಾಗುತ್ತಿರುವ ಫಲಪುಷ್ಪ ಪ್ರದರ್ಶನವನ್ನು ಜನಪ್ರಿಯ ಸಿನಿಮಾ ನಟರು ಮತ್ತು ಕರ್ನಾಟಕದ ಸಾಂಸ್ಕೃತಿಕ ಐಕಾನ್ಗಳು ಎಂದು ಖ್ಯಾತರಾದ ಡಾ.ರಾಜ್ಕುಮಾರ್ ಮತ್ತು ಪುನೀತ್ ರಾಜ್ಕುಮಾರ್ ಅವರಿಗೆ ಅರ್ಪಿಸಲಾಗಿದೆ ಎಂದು ಮುನಿರತ್ನ ತಿಳಿಸಿದರು. ಆಗಸ್ಟ್ 5ರಂದು ಲಾಲ್ಬಾಗ್ನಲ್ಲಿ 212ನೇ ಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ. ಒಟ್ಟು 11 ದಿನ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ರಾಜ್ ಕುಟುಂಬಸ್ಥರು ಪಾಲ್ಗೊಳ್ಳಲಿದ್ದಾರೆ. 2 ವರ್ಷದ ಬಳಿಕ ಫಲ, ಪುಷ್ಪ ಪ್ರದರ್ಶನ ಆಯೋಜನೆಯಾಗಿರುವ ಹಿನ್ನೆಲೆಯಲ್ಲಿ ಈ ಬಾರಿ ಲಾಲ್ಬಾಗ್ ಪ್ರವೇಶ ದರ ಕಡಿಮೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೋವಾ ಪಬ್‌ ದುರಂತ, ಮಾಲೀಕರ ವಿರುದ್ಧ ಕ್ರಮಕ್ಕೆ ಪ್ರತ್ಯಕ್ಷದರ್ಶಿಗಳು ಒತ್ತಾಯ

ಜನೌಷಧಿ ಕೇಂದ್ರ ಸ್ಥಗಿತ ರದ್ದುಗೊಳಿಸಿದ ಕೋರ್ಟ್ ನಿರ್ಧಾರದ ಬಗ್ಗೆ ವಿಜಯೇಂದ್ರ ಹೇಳಿದ್ದೇನು

ಬಾಯಿ ಮುಚ್ಚಿಸಿದ್ದರು ಮತ್ತೇ ತಂದೆಯ ಪರ ಬ್ಯಾಟ್ ಬೀಸಿದ ಯತೀಂದ್ರ ಸಿದ್ದರಾಮಯ್ಯ

ಅಮಿತ್ ಶಾ ಕೈಗಳು ನಡುಗುತ್ತಿದ್ದವು: ರಾಹುಲ್ ಗಾಂಧಿ ಕಿಡಿ

ಅತ್ಯಾಚಾರ ಅಪರಾಧಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಮತ್ತೆ ಹಿನ್ನಡೆ

ಮುಂದಿನ ಸುದ್ದಿ
Show comments