Select Your Language

Notifications

webdunia
webdunia
webdunia
webdunia

ಇಂಧನ ದರ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Siddaramaiah

Sampriya

ವಿಜಯಪುರ , ಭಾನುವಾರ, 16 ಜೂನ್ 2024 (17:39 IST)
Photo Courtesy X
ವಿಜಯಪುರ: ಪೆಟ್ರೋಲ್ ಬೆಲೆ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ. ಪ್ರಜಾಪ್ರಭುತ್ವದಲ್ಲಿ ಸೋಲು ಗೆಲುವು ಇದ್ದದ್ದೇ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಜಯಪುರ ಜಿಲ್ಲೆಯ ಇಂಚಗೇರಿ ಗ್ರಾಮದ ಹೆಲಿಪ್ಯಾಡ್ ನಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದರು.

ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ಸೇಡಿಗಾಗಿ ದರ ಏರಿಕೆ ಮಾಡಿದ್ದಾರೆ ಎಂಬ  ಹೇಳಿಕೆಗೆ ಉತ್ತರಿಸಿದ ಮುಖ್ಯಮಂತ್ರಿಗಳು  ವಿಜಯಪುರದಲ್ಲಿ ನಾವು ಸೋತಿದ್ದೇವೆ.  ಕರ್ನಾಟಕದಲ್ಲಿ ನಾವು ನಿರೀಕ್ಷೆ ಮಾಡಿದಷ್ಟು ಸ್ಥಾನಗಳು ಬಂದಿಲ್ಲ. ವಿಜಯಪುರದಲ್ಲಿ ಗೆಲ್ಲುತ್ತೇವೆ ಎಂಬ ನಿರೀಕ್ಷೆಯಿತ್ತು ಎಂದರು.

 ಕರ್ನಾಟಕದಲ್ಲಿ ಕಳೆದ ಚುನಾವಣೆಗೆ ಹೋಲಿಕೆ ಮಾಡಿದರೆ , ಈ ಬಾರಿ ಒಂಭತ್ತು ಸ್ಥಾನಗಳನ್ನು  ಗಳಿಸಿದ್ದೇವೆ. ಬಿಜೆಪಿ ಕಳೆದ ಬಾರಿ 25 ಇದ್ದನ್ನು ಈ ಬಾರಿ 19ಕ್ಕೆ ಇಳಿದಿದ್ದಾರೆ. ನಮಗೆ ಶೇ 13 ಮತ ಹಂಚಿಕೆಯಾಗಿದೆ. ನಾವು ಸೋತಿದ್ದೇವೆಯೇ ಎಂದು ಪ್ರಶ್ನಿಸಿದರು. ನಮ್ಮ ಲೆಕ್ಕಾಚಾರದ ಪ್ರಕಾರ, ನಿರೀಕ್ಷೆ ಮಾಡಿದಷ್ಟು ಸ್ಥಾನಗಳು ಬಂದಿಲ್ಲ ಅಷ್ಟೇ ಎಂದರು.

ಸೋತಿರುವುದು ಬಿಜೆಪಿ: ಚುನಾವಣೆಯಲ್ಲಿ  ಸೋತಿರುವುದು ಬಿಜೆಪಿ. ಕಳೆದ ಬಾರಿ 303 ಸ್ಥಾನಗಳನ್ನು ಪಡೆದು ಈ ಬಾರಿ 240 ಸ್ಥಾನಗಳನ್ನು ಪಡೆದು ಬಿಜೆಪಿ ಸೋತಿದೆ ಎಂದರು. ಕರ್ನಾಟಕದಲ್ಲಿ 15 ಸ್ಥಾನ ಬರಬಹುದೆಂಬ ನಿರೀಕ್ಷೆಯಿತ್ತು. ವಿಧಾನಸಭಾ ಚುನಾವಣೆಗೆ ಹೋಲಿಸಿದರೆ  ಕಡಿಮೆ ಮತ ಬಂದಿದೆ, ಮೋದಿ ಅಲೆ ಕಡಿಮೆಯಾಗಿದೆ ಎಂದರು.

ಸಾರ್ವಜನಿಕರಲ್ಲಿ ಗ್ಯಾರಂಟಿ ಗಳನ್ನು ನಿಲ್ಲಿಸುತ್ತಾರೆ ಎಂಬ ಗಾಳಿಸುದ್ದಿ ಎದ್ದಿರುವ ಬಗ್ಗೆ ಮಾತನಾಡಿ ಗ್ಯಾರಂಟಿಗಳನ್ನು ಬಡವರ ಅನುಕೂಲಕ್ಕಾಗಿ ಜಾರಿಮಾಡಿದೆ ಚುನಾವಣೆಗಾಗಿ ಅಲ್ಲ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ಇತರೆ ರಾಜ್ಯಗಳಿಗಿಂತ ರಾಜ್ಯದಲ್ಲಿ ಇಂಧನ ದರ ಕಡಿಮೆಯಿದೆ: ಬೆಲೆ ಏರಿಕೆಗೆ ಸಿಎಂ ಸಮರ್ಥನೆ