Select Your Language

Notifications

webdunia
webdunia
webdunia
webdunia

ಜೈಲಿನಲ್ಲಿ ಸತ್ಯೇಂದ್ರ ಜೈನ್​ಗೆ ಫುಲ್ ಮಸಾಜ್

Full massage for Satyendra Jain in jail
dehali , ಶನಿವಾರ, 19 ನವೆಂಬರ್ 2022 (19:43 IST)
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಸಚಿವ ಸತ್ಯೇಂದ್ರ ಜೈನ್, ತಿಹಾರ್ ಜೈಲಿನಲ್ಲಿ ಸೇರ್ಪಡೆಗೊಳ್ಳುತ್ತಿರುವ ವಿಡಿಯೋವನ್ನು ಬಿಜೆಪಿ ಬಿಡುಗಡೆ ಮಾಡಿದೆ. ಸತ್ಯೇಂದ್ರ ಜೈನ್‌ಗೆ ವಿಐಪಿ ಟ್ರೀಟ್‌ಮೆಂಟ್ ನೀಡಿದ್ದಕ್ಕಾಗಿ ತಿಹಾರ್ ಜೈಲಿನ ಸೂಪರಿಂಟೆಂಡೆಂಟ್ ಅಜಿತ್ ಕುಮಾರ್ ಅವರನ್ನು ಅಮಾನತುಗೊಳಿಸಿದ ಕೆಲವು ದಿನಗಳ ನಂತರ ಇದೀಗ ಬಿಜೆಪಿ ಹಳೆಯ ವಿಡಿಯೋ ಬಿಡುಗಡೆಯಾಗಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಸತ್ಯೇಂದ್ರ ಜೈನ್‌ಗೆ ತಿಹಾರ್ ಜೈಲಿನಲ್ಲಿ ವಿಐಪಿ ಚಿಕಿತ್ಸೆ ನೀಡಲಾಗಿದ್ದು, ತಲೆಗೆ ಮದ್ದು, ಪಾದಕ್ಕೆ ಮದ್ದು ಮತ್ತು ಬೆನ್ನಿಗೆ ಚಿಕಿತ್ಸೆ ನೀಡುತ್ತಿರುವುದನ್ನು ಸಿಸಿಟಿವಿ ವಿಡಿಯೋದಲ್ಲಿ ನೋಡಬಹುದಾಗಿದೆ. ಆಪ್ ದೆಹಲಿ ಸಚಿವರಿಗೆ ಜೈಲಿನಲ್ಲಿ ಐಷಾರಾಮಿ ವ್ಯಸ್ಥೆ ಕಲ್ಪಿಸಿಕೊಟ್ಟಿರುವುದಕ್ಕೆ ಸಂಬಂಧಿಸಿದ ಪುರಾವೆಗಳನ್ನು ED ನ್ಯಾಯಾಲಯಕ್ಕೆ ಸಲ್ಲಿಸಿದೆ. 58 ವರ್ಷದ ದೆಹಲಿ ಸರ್ಕಾರದ ಸಚಿವ ಸತ್ಯೇಂದ್ರ ಜೈನ್ ಅವರನ್ನು ಮೇ 30 ರಂದು ಬಂಧಿಸಲಾಗಿದೆ. ಈ ವಿಡಿಯೋವನ್ನು ಟ್ವೀಟ್ ಮಾಡಿರುವ BJP, “ಜೈಲಿನಲ್ಲಿ VVIP ಚಿಕಿತ್ಸೆ! ಕೇಜ್ರಿವಾಲ್ ಇಂತಹ ಮಂತ್ರಿಯನ್ನು ಸಮರ್ಥಿಸಿಕೊಳ್ಳುತ್ತಾರಾ? ಅವರನ್ನು ವಜಾ ಮಾಡಬೇಕಲ್ಲವೇ? ಇದು AAPನ ನಿಜವಾದ ಮುಖವನ್ನು ತೋರಿಸುತ್ತದೆ! ಎಂದು ಬಿಜೆಪಿಯ ಶೆಹಜಾದ್ ಜೈಹಿಂದ್ ಅವರು ಸತ್ಯೇಂದ್ರ ಜೈನ್ ಕಾಲಿಗೆ ಮದ್ದು ಮಾಡಿಸಿಕೊಳ್ಳುತ್ತಿರುವ ಮತ್ತೊಂದು ಸಿಸಿಟಿವಿ ದೃಶ್ಯವನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೋದಿ ಹೇಳಿಕೆ ಶ್ಲಾಘಿಸಿದ ಅಮೆರಿಕಾ