ಧಾರವಾಡ : ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯು ಯುವ ಪೀಳಿಗೆಯ ಭವಿಷ್ಯವನ್ನು ಉಜ್ವಲ ಮತ್ತು ಸುರಕ್ಷಿತವಾಗಿಸುತ್ತದೆ ಎಂದು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟರು.
ಧಾರವಾಡದ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ(ಕರ್ನಾಟಕ)ದ ಘಟಿಕೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಶಿಕ್ಷಣ ನೀತಿಯ ಗುರಿಯು ಪ್ರತಿಯೊಬ್ಬರಿಗೂ ಉನ್ನತ ಶಿಕ್ಷಣವನ್ನು ಒದಗಿಸುವುದು, ಮಾತೃಭಾಷೆಯಲ್ಲಿ ಅಧ್ಯಯನದ ಜೊತೆಗೆ ನೆಚ್ಚಿನ ವಿಷಯವನ್ನು ಆಯ್ಕೆ ಮಾಡುವ ಸ್ವಾತಂತ್ರ್ಯವನ್ನು ನೀಡುತ್ತದೆ.
ಭಾರತದ ಸಾಂಸ್ಕೃತಿಕ ವೈಭವವನ್ನು ಮರುಸ್ಥಾಪಿಸಲು ಮತ್ತು ಭಾರತವನ್ನು ಜಾಗತಿಕ ಜ್ಞಾನ ಶಕ್ತಿಯನ್ನಾಗಿ ಮಾಡುವ ಈ ಶಿಕ್ಷಣ ನೀತಿಯನ್ನು ಯಶಸ್ವಿಗೊಳಿಸಲು ಯುವಪೀಳಿಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು.