Publish Date: Fri, 15 Sep 2017 (13:08 IST)
Updated Date: Fri, 15 Sep 2017 (13:11 IST)
ಸರಕಾರದಲ್ಲಿ ಕೆಲಸವಾಗಲು ಸೂಟ್‌ಕೇಸ್ ಕೊಡಬೇಕು ಎನ್ನುವ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಮಲ್ಲಿಕಾ ಘಂಟಿ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಗರಂ ಆಗಿದ್ದಾರೆ.
ಜವಾಬ್ದಾರಿ ಸ್ಥಾನದಲ್ಲಿರುವ ಮಲ್ಲಿಕಾ ಘಂಟಿ ಅವರೇ ನೀಡಿದ ಹೇಳಿಕೆಯ ಬಗ್ಗೆ ಸ್ಪಷ್ಟನೆ ನೀಡಬೇಕು. ಮನಬಂದಂತೆ ಸರಕಾರದ ವಿರುದ್ಧ ಹೇಳಿಕೆ ನೀಡುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.
ಯಾರು, ಎಲ್ಲಿ, ಯಾವಾಗ ಯಾರಿಗೆ ಸೂಟಕೇಸ್ ಕೊಟ್ಟಿದ್ದಾರೆ ಎನ್ನುವುದನ್ನು ಬಹಿರಂಗಪಡಿಸಲಿ. ಇಲ್ಲವಾದಲ್ಲಿ ಪುರಾವೆಗಳಿಲ್ಲದ ಹೇಳಿಕೆಗಳಿಗೆ ಅರ್ಥವಿಲ್ಲ ಎಂದು ತಿರುಗೇಟು ನೀಡಿದ್ದಾರೆ.
ಕೆಲ ದಿನಗಳ ಹಿಂದೆ ನಡೆದ ಕಾರ್ಯಕ್ರಮವೊಂದರಲ್ಲಿ ಕುಲಪತಿ ಮಲ್ಲಿಕಾ ಘಂಟಿ, ಸರಕಾರದಲ್ಲಿ ಕೆಲಸವಾಗಲು ಸೂಟ್‌ಕೇಸ್ ಕೊಡಬೇಕಾಗುತ್ತದೆ ಎನ್ನುವ ವಿವಾದಾತ್ಮಕ ಹೇಳಿಕೆ ನೀಡಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.