Daily Horoscope
✕

ಜಿ. ಪರಮೇಶ್ವರ್‌ಗೆ ಅಸಮಾಧಾನವಿಲ್ಲ: ರಾಮಲಿಂಗಾರೆಡ್ಡಿ ಸ್ಪಷ್ಟನೆ

Webdunia
ಶನಿವಾರ, 2 ಸೆಪ್ಟಂಬರ್ 2017 (12:55 IST)
ನಿನ್ನೆ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಗೈರುಹಾಜರಾಗಿದ್ದ ಕೆಪಿಸಿಸಿ ಅಧ್ಯಕ್ಷ ಜಿ.,ಪರಮೇಶ್ವರ್ ಅವರಿಗೆ ಯಾವುದೇ ಅಸಮಾಧಾನವಿಲ್ಲ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಇಂದು ಬೆಳಿಗ್ಗೆ ಕೆಪಿಸಿಸಿ ಅಧ್ಯಕ್ಷ, ಮಾಜಿ ಗೃಹಸಚಿವ ಜಿ.ಪರಮೇಶ್ವರ್ ಅವರನ್ನು ನೂತನ ಗೃಹ ಸಚಿವ ರಾಮಲಿಂಗಾರೆಡ್ಡಿ ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೂರ್ವನಿಯೋಜಿತ ಕಾರ್ಯಕ್ರಮಗಳಿಂದಾಗಿ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಬರಲು ಸಾಧ್ಯವಾಗಲಿಲ್ಲ ಎಂದು ತಿಳಿಸಿದ್ದಾರೆ. 
 
ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಅವರಿಗೆ ಅಸಮಾಧಾನವಾಗಿದೆ. ಪರಮೇಶ್ವರ್ ಮತ್ತು ಸಿಎಂ ಸಿದ್ದರಾಮಯ್ಯ ಮಧ್ಯೆ ಭಿನ್ನಮತ ಸ್ಫೋಟಗೊಂಡಿದೆ ಎನ್ನುವ ವರದಿಗಳು ಸತ್ಯಕ್ಕೆ ದೂರವಾಗಿವೆ ಎಂದು ಹೇಳಿದ್ದಾರೆ.
 
ಪರಮೇಶ್ವರ್ ಅವರು ಗೃಹ ಇಲಾಖೆಯ ಕಾರ್ಯವೈಖರಿಗಳ ಬಗ್ಗೆ ಸಲಹೆ ನೀಡಿದ್ದಾರೆ. ಅವರ ಸಲಹೆಯಂತೆ ಖಾತೆಯನ್ನು ಯಶಸ್ವಿಯಾಗಿ ನಿಭಾಯಿಸುವ ವಿಶ್ವಾಸವಿದೆ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಿಯಾಂಕಾ ವಾದ್ರಾ ತಳ್ಳಿದ್ದಕ್ಕೆ ಮೊಣಕೈಯಲ್ಲಿ ನೂಕಿದ ಮಹಿಳಾ ಪೊಲೀಸ್ ಅಧಿಕಾರಿ: Viral video

ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಮೇಲೆ ಹಲ್ಲೆಯಾಗಿದೆ ಎಂದು ಇಂದು ಕಾಂಗ್ರೆಸ್ ಪ್ರತಿಭಟನೆ

Karnataka Weather: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ

ಸಾಗರ್ ರತ್ನ 100% ಸಸ್ಯಾಹಾರಿ ಅಲ್ವೇ: ಬ್ರಿಕ್ಸ್‌ನಲ್ಲಿ ಸಸ್ಯಾಹಾರಿ ಮೆನು ಗೇಲಿ ಮಾಡಿದ್ದ ರಾಹುಲ್ ಗಾಂಧಿ ಕಾಲೆಳೆದ ಬಿಜೆಪಿ

ಸ್ಟಿಂಗ್ ಆಪರೇಷನ್‌ ಹೆಸರಿನಲ್ಲಿ ಬ್ಲ್ಯಾಕ್‌ಮೇಲ್ ಮಾಡುವ ಚರಿತ್ರೆ ಕಾಂಗ್ರೆಸ್‌ನದ್ದು: ಬಿ.ವೈ. ವಿಜಯೇಂದ್ರ

ಮುಂದಿನ ಸುದ್ದಿ
Show comments