ಇಡಿ ದಾಳಿ ನಡೆಯುತ್ತಿರುವಾಗಲೇ ಸಿಎಂ ಅನ್ನು ಭೇಟಿಯಾದ ಜಿ ಪರಮೇಶ್ವರ್‌

Sampriya
ಗುರುವಾರ, 22 ಮೇ 2025 (16:42 IST)
Photo Credit X
ಬೆಂಗಳೂರು: ತಮ್ಮ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ ನಡೆಯುತ್ತಿರುವ ನಡುವೆಯೇ ಗೃಹ ಸಚಿವ ಜಿ ಪರಮೇಶ್ವರ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿರುವುದು ಭಾರೀ ಕುತೂಹಲ ಮೂಡಿಸಿದೆ.

ಭೇಟಿಯ ಹಿಂದಿನ ನಿಖರವಾದ ವಿವರಗಳು ಇನ್ನೂ ಹೊರಬಂದಿಲ್ಲ. ಆದರೆ, ಕಾಂಗ್ರೆಸ್ ಮೂಲಗಳು ಹೇಳುವಂತೆ ಪರಮೇಶ್ವರ ಅವರು ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂಗೆ ದಾಳಿಯ ಬಗ್ಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಚಿನ್ನದ ಕಳ್ಳಸಾಗಣೆ ದಂಧೆ ಸೇರಿದಂತೆ ಅಕ್ರಮ ಹಣಕಾಸು ವಹಿವಾಟು ಬಗ್ಗೆ ಇಡಿ ತನಿಖೆ ನಡೆಸುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಚಿನ್ನ ಕಳ್ಳ ಸಾಗಣೆ ಆರೋಪಿ, ನಟಿ ರನ್ಯಾರಾವ್ ಖಾತೆಗೆ ಹವಾಲಾ ಹಣ ವರ್ಗಾವಣೆ ಮಾಡಿದವರನ್ನು ಗುರಿಯಾಗಿಸಿಕೊಂಡು ED ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ರಾಜ್ಯದ 16 ಸ್ಥಳಗಳಲ್ಲಿ ದಾಳಿ ನಡೆಸಿದೆ. ಇದರಲ್ಲಿ ಪರಮೇಶ್ವರ ಅವರಿಗೆ ಸಂಬಂಧಿಸಿದ ಮೂರು ಶಿಕ್ಷಣ ಸಂಸ್ಥೆಗಳೂ ಸೇರಿವೆ.

ಸಿದ್ಧಾರ್ಥ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಸಿದ್ಧಾರ್ಥ ವೈದ್ಯಕೀಯ ಕಾಲೇಜು ಸೇರಿದಂತೆ ಮೂರು ಸಂಸ್ಥೆಗಳು ಮತ್ತು ವಿಶ್ವವಿದ್ಯಾನಿಲಯಕ್ಕೆ ED ಅಧಿಕಾರಿಗಳು ಭೇಟಿ ನೀಡಿ ಕಳೆದ ಐದು ವರ್ಷಗಳ ಆರ್ಥಿಕ ದಾಖಲೆಗಳನ್ನು ಕೋರಿದ್ದಾರೆ ಎಂದು ಪರಮೇಶ್ವರ ಹೇಳಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಳಕು ಕಿಡ್ನಿ ನೀಡಿದ್ದೇನೆ ಎಂದಿದ್ದಾರೆ, ನನ್ನ ತಪ್ಪು ಯಾರೂ ಮಾಡಬೇಡಿ: ಲಾಲು ವಿರುದ್ಧ ಕಿಡಿಕಾರಿದ ಪುತ್ರಿ ರೋಹಿಣಿ

ಭಯೋತ್ಪಾದನಾ ಜಾಲ ಹಿನ್ನೆಲೆ: ಅನಂತ್‌ನಾಗ್‌ನ ವೈದ್ಯರ ಮನೆ ಮೇಲೆ ಸಿಐಕೆ ದಾಳಿ

ಅಣ್ಣ ಶಿವಕುಮಾರ್ ಸಿಎಂ ಆಗುವ ಭವಿಷ್ಯದ ಬಗ್ಗೆ ಡಿಕೆ ಸುರೇಶ್ ಹೇಳಿದ್ದೇನು ಗೊತ್ತಾ

ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ

Karnataka Weather:ಕರಾವಳಿಯಲ್ಲಿ ಮಳೆ ನಿರೀಕ್ಷೆ, ಉತ್ತರ ಕರ್ನಾಟಕದಲ್ಲಿ ಶೀತಗಾಳಿ ಸಾಧ್ಯತೆ

ಮುಂದಿನ ಸುದ್ದಿ
Show comments