Select Your Language

Notifications

webdunia
webdunia
webdunia
webdunia

G Parameshwar: ಹೊರಗಿನಿಂದ ಬಂದವರಿಗೆ ಇಲ್ಲಿನ ಸಂಸ್ಕೃತಿ ಗೊತ್ತಿರಲ್ಲ, ಅಪರಾಧ ಕೃತ್ಯ ಮಾಡ್ತಾರೆ: ಗೃಹಸಚಿವ ಪರಮೇಶ್ವರ್

G Parameshwar

Krishnaveni K

ಬೆಂಗಳೂರು , ಸೋಮವಾರ, 14 ಏಪ್ರಿಲ್ 2025 (11:50 IST)
ಬೆಂಗಳೂರು: ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಗೃಹಸಚಿವ ಜಿ ಪರಮೇಶ್ವರ್ ಹೊರಗಿನಿಂದ ಬಂದವರಿಗೆ ಇಲ್ಲಿನ ಸಂಸ್ಕೃತಿ ಗೊತ್ತಿರುವುದಿಲ್ಲ. ಅವರೇ ಅಪರಾಧ ಕೃತ್ಯ ಮಾಡುತ್ತಾರೆ ಎಂದಿದ್ದಾರೆ.

ಹುಬ್ಬಳ್ಳಿಯಲ್ಲಿ ನಡೆದ 5 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಭಾರೀ ಸದ್ದು ಮಾಡಿತ್ತು. ನಿನ್ನೆ ಸಂಜೆ ಬಿಹಾರ ಮೂಲದ ಆರೋಪಿ ರಿತೇಶ್ ಕುಮಾರ್ ನನ್ನು ಪೊಲೀಸರು ಎನ್ ಕೌಂಟರ್ ಮಾಡಿ ಹತ್ಯೆ ಮಾಡಿದ್ದರು. ಘಟನೆ ಬಗ್ಗೆ ಇಂದು ಗೃಹಸಚಿವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

‘ಬೆಂಗಳೂರಿಗೆ ಹಲವರು ಹೊರ ರಾಜ್ಯಗಳಿಂದ ಬಂದು ಹೋಗುತ್ತಾರೆ. ಹೀಗೆ ಹೊರಗಿನಿಂದ ಬಂದವರಿಗೆ ಇಲ್ಲಿನ ಸಂಸ್ಕೃತಿ ಗೊತ್ತಿರಲ್ಲ. ಇಲ್ಲಿನ ಜನರ ಭಾವನೆ ಅರ್ಥ ಮಾಡಿಕೊಳ್ಳದೆ ವರ್ತಿಸುತ್ತಾರೆ’ ಎಂದಿದ್ದಾರೆ.

‘ಹೊರ ರಾಜ್ಯದಿಂದ ಬಂದವರಿಂದಲೇ ಅದರಲ್ಲೂ ವಿಶೇಷವಾಗಿ ಕಾರ್ಮಿಕರಿಂದಲೇ ಅಪರಾಧ ಕೃತ್ಯಗಳು ನಡೆಯುತ್ತಿವೆ. ಈ ಬಗ್ಗೆ ಕಾರ್ಮಿಕ ಇಲಾಖೆ ಜೊತೆ ಜಂಟಿಯಾಗಿ ಸಭೆ ನಡೆಸಿ ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳುತ್ತೇವೆ’ ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

Gold price today: ಸೌರಮಾನ ಯುಗಾದಿ ದಿನ ಚಿನ್ನದ ಬೆಲೆ ಎಷ್ಟಾಗಿದೆ ನೋಡಿ