Select Your Language

Notifications

webdunia
webdunia
webdunia
webdunia

ಬಿಜೆಪಿಯವರ ಪ್ರತಿಭಟನೆಗೆಲ್ಲಾ ತಲೆಕೆಡಿಸಿಕೊಳ್ಳಬೇಡಿ: ಕೆಜೆ ಜಾರ್ಜ್ ಗೆ ಪರಮೇಶ್ವರ್ ಅಭಯ

ಬಿಜೆಪಿಯವರ ಪ್ರತಿಭಟನೆಗೆಲ್ಲಾ ತಲೆಕೆಡಿಸಿಕೊಳ್ಳಬೇಡಿ: ಕೆಜೆ ಜಾರ್ಜ್ ಗೆ ಪರಮೇಶ್ವರ್ ಅಭಯ
ಬೆಂಗಳೂರು , ಬುಧವಾರ, 15 ನವೆಂಬರ್ 2017 (10:30 IST)
ಬೆಂಗಳೂರು: ಡಿವೈಎಸ್ ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಿಬಿಐ ಎಫ್ ಐಆರ್ ದಾಖಲಿಸಿದ ಹಿನ್ನಲೆಯಲ್ಲಿ ಸಚಿವ ಕೆಜೆ ಜಾರ್ಜ್ ರಾಜೀನಾಮೆ ನೀಡಬೇಕೆಂದು ಬಿಜೆಪಿ ಬೆಳಗಾವಿ ಅಧಿವೇಶನದಲ್ಲಿ ಪ್ರತಿಭಟನೆ ನಡೆಸುತ್ತಿದ್ದರೆ, ಇತ್ತ ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್ ಜಾರ್ಜ್ ಬೆಂಬಲಕ್ಕೆ ನಿಂತಿದ್ದಾರೆ.

 
ಸದನದ ಕಲಾಪಕ್ಕೆ ಮೊದಲು ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕರು, ಸಚಿವರ ಸಭೆ ನಡೆಯಲಿದೆ. ಇದಕ್ಕೂ ಮೊದಲು ಸಚಿವ ಜಾರ್ಜ್ ರನ್ನು ಕರೆಸಿಕೊಂಡಿರುವ ಪರಮೇಶ್ವರ್, ನಿಮ್ಮ ಬೆಂಬಲಕ್ಕೆ ನಾವಿದ್ದೇವೆ. ಬಿಜೆಪಿ ಪ್ರತಿಭಟನೆಗೆ ತಲೆಕೆಡಿಸಿಕೊಳ್ಳಬೇಡಿ ಎಂದು ಅಭಯ ನೀಡಿದ್ದಾರೆ ಎನ್ನಲಾಗಿದೆ.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಜಾರ್ಜ್ ಬಿಜೆಪಿ ಪ್ರತಿಭಟನೆಗೆ ತಲೆಕೆಡಿಸಿಕೊಳ್ಳಲ್ಲ. ರಾಜೀನಾಮೆ ನೀಡಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಧಾನಿ ಮೋದಿಯನ್ನು ತುಘಲಕ್ ಎಂದ ಬಿಜೆಪಿ ಹಿರಿಯ ನಾಯಕ