Publish Date: Fri, 01 Sep 2017 (18:39 IST)
Updated Date: Fri, 01 Sep 2017 (18:41 IST)
ರಾಜಭವನದಲ್ಲಿ ನಡೆದ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಗೈರುಹಾಜರಾಗಿರುವುದು ಹುಬ್ಬೇರಿಸುವಂತೆ ಮಾಡಿದೆ.
ನಗರದ ಸದಾಶಿವ ನಗರದ ನಿವಾಸದಲ್ಲಿಯೇ ಇರುವ ಜಿ.ಪರಮೇಶ್ವರ್ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಗೈರಾಗಲು ಸಿಎಂ ಸಿದ್ದರಾಮಯ್ಯರೊಂದಿಗೆ ಇರುವ ಭಿನ್ನಾಭಿಪ್ರಾಯ ಕಾರಣ ಎಂದು ಮೂಲಗಳು ತಿಳಿಸಿವೆ.
ಷಡಕ್ಷರಿಗೆ ಸಚಿವ ಸ್ಥಾನ ನೀಡುವ ಬದಲಿಗೆ ಗೀತಾ ಮಹಾದೇವ ಪ್ರಸಾದ್ ಅವರಿಗೆ ನೀಡಿರುವುದು, ನರೇಂದ್ರ ಸ್ವಾಮಿಗೆ ಸಚಿವ ಸ್ಥಾನ ನಿರಾಕರಿಸಿರುವ ಸಿಎಂ ಸಿದ್ದರಾಮಯ್ಯ ನಿರ್ಧಾರದಿಂದ ಪರಮೇಶ್ವರ್ ಬೇಸರಗೊಂಡಿದ್ದಾರೆ ಎನ್ನಲಾಗುತ್ತಿದೆ.
ವಿಧಾನಪರಿಷತ್ ಚುನಾವಣೆಯಲ್ಲಿ ತಮ್ಮ ಬೆಂಬಲಿಗ ಜೆ.ಚಂದ್ರಶೇಖರ್ ಅವರಿಗೆ ಟಿಕೆಟ್ ನೀಡುವಂತೆ ಪರಮೇಶ್ವರ್, ಸಿಎಂ ಸಿದ್ದರಾಮಯ್ಯನವರಿಗೆ ಮನವಿ ಮಾಡಿದ್ದರು ಎನ್ನಲಾಗುತ್ತಿದೆ. ಆದರೆ, ಸಿಎಂ ಸಿದ್ದರಾಮಯ್ಯ ತಮ್ಮ ಬೆಂಬಲಿಗ ಸಿಎಂ ಇಬ್ರಾಹಿಂ ಅವರಿಗೆ ನೀಡಿರುವುದು ಕೂಡಾ ಇಬ್ಬರ ನಡುವಿನ ವೈಮನಸ್ಸಿಗೆ ಕಾರಣ ಎಂದು ಅನಾಮಧೇಯ ಮೂಲಗಳ ತಿಳಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.