Select Your Language

Notifications

webdunia
webdunia
webdunia
webdunia

ದಶಪಥ ಹೆದ್ದಾರಿ ಪರಿಶೀಲನೆ ನಡೆಸಲಿದ್ದಾರೆ ಗಡ್ಕರಿ

ದಶಪಥ ಹೆದ್ದಾರಿ ಪರಿಶೀಲನೆ ನಡೆಸಲಿದ್ದಾರೆ ಗಡ್ಕರಿ
ಮಂಡ್ಯ , ಗುರುವಾರ, 5 ಜನವರಿ 2023 (10:28 IST)
ಮಂಡ್ಯ : ಕೇಂದ್ರ ಸರ್ಕಾರದ ಮಹತ್ವಾಂಕ್ಷಿ ಯೋಜನೆಯಾದ ಬೆಂಗಳೂರು-ಮೈಸೂರು ರಾಷ್ಟ್ರೀಯ ದಶಪಥ ಹೆದ್ದಾರಿ ಕಾಮಗಾರಿ ಇದೀಗ ಅಂತ್ಯಕ್ಕೆ ಬಂದಿದೆ.
 
ಕಂಪ್ಲೀಟ್ ಆಗಿರುವ ಕಾಮಗಾರಿಯನ್ನು ವೀಕ್ಷಣೆ ಮಾಡಲು ಕೇಂದ್ರ ರಸ್ತೆ ಸಾರಿಗೆ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ನಾಳೆ ಆಗಮಿಸಲಿದ್ದಾರೆ. ಈ ಹೊತ್ತಿನಲ್ಲೇ ಇದೀಗ ಈ ಹೆದ್ದಾರಿಗೆ ಯಾವ ಹೆಸರು ಇಡಬೇಕೆಂದು ಬಿಜೆಪಿ ನಾಯಕರಲ್ಲಿ ಪತ್ರದ ಜಟಾಪಟಿಯೂ ಸಹ ಎದ್ದಿದೆ.

ಸಿಲಿಕಾನ್ ಸಿಟಿ ಬೆಂಗಳೂರು ಮತ್ತು ಸಾಂಸ್ಕೃತಿಕ ನಗರಿ ಮೈಸೂರು ನಡುವೆ ವಾಹನ ಸಂಚಾರ ಸುಗಮ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಬೆಂಗಳೂರು-ಮೈಸೂರು ರಾಷ್ಟ್ರೀಯ ದಶಪಥ ಹೆದ್ದಾರಿ ಮಹತ್ವಾಕಾಂಕ್ಷಿ ಯೋಜನೆಯನ್ನು ಅನುಷ್ಠಾನ ಮಾಡುತ್ತಿದ್ದು,

ಇನ್ನೂ ಕೆಲವೇ ದಿನಗಳಲ್ಲಿ ಈ ಕಾಮಗಾರಿ ಮುಕ್ತಾಯಗೊಳ್ಳಲಿದ್ದು ವಾಹನ ಸಂಚಾರಕ್ಕೆ ಸಂಪೂರ್ಣ ರಸ್ತೆಯನ್ನು ಅನುವು ಮಾಡಿಕೊಳ್ಳಲಾಗುತ್ತದೆ. ಈಗಾಗಲೇ ಈ ಕಾಮಗಾರಿ 88% ನಷ್ಟು ಮುಕ್ತಾಯಗೊಂಡಿದ್ದು ಇನ್ನೂ ಕೇವಲ 12%ರಷ್ಟು ಕಾಮಗಾರಿ ಮಾತ್ರ ಬಾಕಿ ಇದೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಪಘಾತ : ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ