Select Your Language

Notifications

webdunia
webdunia
webdunia
webdunia

ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್

ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್
ಬೆಂಗಳೂರು , ಸೋಮವಾರ, 13 ಮಾರ್ಚ್ 2017 (19:06 IST)
ಬಳ್ಳಾರಿ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ, ಬ್ರಹ್ಮಿಣಿ ಸ್ಟೀಲ್ಸ್‌ ಕಂಪೆನಿಯ ವಿರುದ್ಧದ ಪ್ರಕರಣಗಳನ್ನು ಹೈಕೋರ್ಟ್ ರದ್ದುಗೊಳಿಸಿದ್ದರಿಂದ, ಬಿಜೆಪಿಯ ಮಾಜಿ ಸಚಿವ ಜನಾರ್ದನ ರೆಡ್ಡಿ ಮತ್ತು ಅವರ ಪತ್ನಿ ಲಕ್ಷ್ಮಿ ಅರುಣಾಗೆ ಬಿಗ್ ರಿಲೀಫ್ ದೊರೆತಂತಾಗಿದೆ.
 
ಜನಾರ್ದನ ರೆಡ್ಡಿ ವಿರುದ್ಧ ಇಡಿ ಕೇಸ್ ರದ್ದುಗೊಳಿಸಿ ಹೈಕೋರ್ಟ್‌ನ ವಿಭಾಗೀಯ ಪೀಠ ಆದೇಶ ಹೊರಡಿಸಿದೆ. 
 
ಜಾರಿ ನಿರ್ದೇಶನಾಲಯ ದಳದ ಅಧಿಕಾರಿಗಳು ಒಎಂಸಿ ಮತ್ತು ಬ್ರಹ್ಮಿಣಿ ಕಂಪೆನಿಗಳ ವಿರುದ್ಧ ದಾಖಲಿಸಿದ್ದ ಪ್ರಕರಣಗಳನ್ನು ಹೈಕೋರ್ಟ್ ಪೀಠ ರದ್ದುಗೊಳಿಸಿದೆ.
 
ಕಳೆದ 2011ರಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು, ರೆಡ್ಡಿ ಕುಟುಂಬಕ್ಕೆ ಸೇರಿದ ಆಸ್ತಿ, ಹೆಲಿಕಾಪ್ಟರ್ ಸೇರಿದಂತೆ ಒಟ್ಟು 884 ಕೋಟಿ ರೂಪಾಯಿಗಳ ಆಸ್ತಿಯನ್ನು ಜಪ್ತಿ ಮಾಡಿದ್ದರು. ಇದೀಗ ಇಡಿ ಅಧಿಕಾರಿಗಳು ಮಾಡಿದ ಜಪ್ತಿ ಪ್ರಕರಣವನ್ನು ಕೋರ್ಟ್ ರದ್ದುಗೊಳಿಸಿದೆ.
 
ಬಳ್ಳಾರಿಯಲ್ಲಿ 2004- 2006 ನಡೆದ ಅಕ್ರಮ ಗಣಿಗಾರಿಕೆ ಪಿಎಂಎಲ್ ಕಾಯ್ದೆಗೆ 2009ರಲ್ಲಿ ತಿದ್ದುಪಡಿ ತರಲಾಗಿತ್ತು. ಕಾಯ್ದೆ ಪೂರ್ವಾನ್ವಯ ಸಾಧ್ಯವಿಲ್ಲವೆಂದ ಹೈಕೋರ್ಟ್ ವಿಬಾಗೀಯ ಪೀಠ ಮಾಜಿ ಸಚಿವ ಜನಾರ್ದನ ರೆಡ್ಡಿ ವಿರುದ್ಧದ ಪ್ರಕರಣಗಳನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಮಧು ಬಂಗಾರಪ್ಪರನ್ನ ಭೇಟಿಯಾದ ಡಿಕೆಶಿ