ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಹಾಗೂ ಚಿಕ್ಕಮಗಳೂರು ಡಿವೈಎಸ್‌ಪಿ ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವವರೆಗೂ ನಮ್ಮ ಹೋರಾಟ ಮುಂದುವರೆಯುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಹಾಗೂ ಚಿಕ್ಕಮಗಳೂರು ಡಿವೈಎಸ್‌ಪಿ ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕು. ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವವರೆಗೂ ಸದನದ ಒಳಗೆ ಹಾಗೂ ಹೊರಗಡೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣದ ನಂತರ ಅಧಿಕಾರಿಗಳು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಅಧಿಕಾರಿಗಳ ಆತ್ಮಹತ್ಯೆ ಪ್ರಕರಣ ಕುರಿತು ಸಂಸತ್‌ನಲ್ಲಿ ಪ್ರಸ್ತಾಪ ಮಡುತ್ತೇವೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ಗಮನಕ್ಕೆ ತರುತ್ತೇವೆ. ಈಗಾಗಲೇ ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡಿ ಪ್ರಕರಣ ಕುರಿತು ಮಾಹಿತಿ ನೀಡಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ