Select Your Language

Notifications

webdunia
webdunia
webdunia
webdunia

ಗಣಪತಿ ಆತ್ಮಹತ್ಯೆ ಪ್ರಕರಣ: ನ್ಯಾಯಾಂಗ ತನಿಖೆಗೆ ಬಿಜೆಪಿ ತೀವ್ರ ವಿರೋಧ

ಗಣಪತಿ ಆತ್ಮಹತ್ಯೆ ಪ್ರಕರಣ: ನ್ಯಾಯಾಂಗ ತನಿಖೆಗೆ ಬಿಜೆಪಿ ತೀವ್ರ ವಿರೋಧ
ಬೆಂಗಳೂರು , ಬುಧವಾರ, 13 ಜುಲೈ 2016 (16:34 IST)
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧಾರವನ್ನು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಖಂಡಿಸಿದ್ದಾರೆ.
 
ವಿಧಾನಸಭೆಯಲ್ಲಿ ಮಾತನಾಡಿದ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್, ರಾಜ್ಯ ಸರಕಾರ ಕೆ.ಜೆ.ಜಾರ್ಜ್ ಅವರನ್ನು ರಕ್ಷಿಸಲು ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಆದೇಶಿಸಿದೆ. ನ್ಯಾಯಾಂಗ ತನಿಖೆ ಹೇಗೆ ನಡೆಯುತ್ತದೆ ನನಗೆ ಗೊತ್ತು. ನ್ಯಾಯಾಂಗ ತನಿಖೆಯ ಪ್ರಶ್ನೆಯೇ ಇಲ್ಲ. ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ತಿಳಿಸಿದ್ದಾರೆ.
 
ರಾಜ್ಯದಲ್ಲಿ ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿಗಳಿಗೆ ರಕ್ಷಣೆ ಇಲ್ಲ. ಭ್ರಷ್ಟರಿಗೆ ಮಾತ್ರ ಸರಕಾರ ರಕ್ಷಣೆ ನೀಡುತ್ತಿದೆ. ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡುವ ಮೂಲಕ ರಾಜ್ಯ ಸರಕಾರ ರಾಜಕೀಯ ಮಾಡುತ್ತಿದೆ. ಪ್ರತಿಪಕ್ಷಗಳು ಅಲ್ಪ ಸಂಖ್ಯಾಂತರನ್ನು ಟಾರ್ಗೆಟ್ ಮಾಡಿವೆ ಎಂದು ಹೇಳಿ ರಾಜಕೀಯ ಮಾಡುತ್ತಿದ್ದೀರಿ ಎಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಗಣಪತಿ ಆತ್ಮಹತ್ಯೆ ಪ್ರಕರಣ ನ್ಯಾಯಾಂಗ ತನಿಖೆಗೆ: ಸಿಎಂ ಸಿದ್ದರಾಮಯ್ಯ