Select Your Language

Notifications

webdunia
webdunia
webdunia
webdunia

ಗಣಪತಿ ಆತ್ಮಹತ್ಯೆ ಪ್ರಕರಣ: ಸಿಐಡಿ ತಂಡದಿಂದ ಮಾಜಿ ಸಚಿವ ಜಾರ್ಜ್ ವಿಚಾರಣೆ

ಗಣಪತಿ ಆತ್ಮಹತ್ಯೆ ಪ್ರಕರಣ: ಸಿಐಡಿ ತಂಡದಿಂದ ಮಾಜಿ ಸಚಿವ ಜಾರ್ಜ್ ವಿಚಾರಣೆ
ಬೆಂಗಳೂರು , ಶುಕ್ರವಾರ, 26 ಆಗಸ್ಟ್ 2016 (18:30 IST)
ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
 
ಡಿವೈಎಸ್‌ಪಿ ಶ್ರೀಧರ್ ನೇತೃತ್ವದ ಸಿಐಡಿ ತಂಡ ಬೆಂಗಳೂರಿನ ಸಿಐಡಿ ಕಚೇರಿಯಲ್ಲಿ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಅವರ ವಿಚಾರಣೆ ನಡೆಸಿದ್ದಾರೆ.
 
ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಹಾಗೂ ಅಧಿಕಾರಿಗಳಾದ ಪ್ರೊನಬ್ ಮೊಹಾಂತಿ ಮತ್ತು ಎಂ.ಎಂ.ಪ್ರಸಾದ್ ವಿರುದ್ಧ ಎಫ್‌ಐಆರ್ ದಾಖಲಿಸಿ ಎಂದು ಮಡಿಕೇರಿ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಅನ್ನಪೂರ್ಣೆಶ್ವರಿ ಮಡಿಕೇರಿ ಟೌನ್ ಪೊಲೀಸರಿಗೆ ಸೂಚನೆ ನೀಡಿದ್ದರು.
 
ಎಂ.ಕೆ.ಗಣಪತಿ ಅವರ ಪುತ್ರ ನೇಹಾಲ್, ಮಡಿಕೇರಿ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಖಾಸಗಿ ದೂರನ್ನು ನೀಡಿದ್ದರು.
 
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆಗೆ ಶರಣಾಗುವ ಮುನ್ನ ಖಾಸಗಿ ಸುದ್ದಿ ವಾಹಿನಿಗೆ ಸಂದರ್ಶನ ನೀಡಿ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಸೇರಿದಂತೆ ಪ್ರೊನಬ್ ಮೊಹಾಂತಿ ಮತ್ತು ಎಂ.ಎಂ.ಪ್ರಸಾದ್ ಅವರು ತನಗೆ ಕಿರುಕುಳ ನೀಡುತ್ತಿದ್ದಾರೆ. ನನಗೇನಾದ್ರೂ ಆದ್ರೆ ಈ ಮೂವರೇ ಕಾರಣ ಎಂದು ಆರೋಪಿಸಿದ್ದರು.

 
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಸಾಮರಸ್ಯ ಕಾಂಗ್ರೆಸ್ ಗುರಿ, ಪ್ರಚೋದನೆ ಬಿಜೆಪಿ ಗುರಿ: ಸಚಿವ ಅಂಜನೇಯ