Select Your Language

Notifications

webdunia
webdunia
webdunia
webdunia

ಗಣಪತಿ ಆತ್ಮಹತ್ಯೆ ಪ್ರಕರಣ ನ್ಯಾಯಾಂಗ ತನಿಖೆಗೆ: ಸಿಎಂ ಸಿದ್ದರಾಮಯ್ಯ

ಗಣಪತಿ ಆತ್ಮಹತ್ಯೆ ಪ್ರಕರಣ ನ್ಯಾಯಾಂಗ ತನಿಖೆಗೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು , ಬುಧವಾರ, 13 ಜುಲೈ 2016 (16:31 IST)
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.
 
ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೊಳಗಾಗಿದ್ದ ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಹೈಕೋರ್ಟ್ ನಿವೃತ ನ್ಯಾಯಮೂರ್ತಿ ನೇತೃತ್ವದ ಸಮಿತಿಯನ್ನು ರಚಿಸಿ ನ್ಯಾಯಾಂಗ ತನಿಖೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.
 
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣ ಸಂಪೂರ್ಣ ತನಿಖೆಯ ವರದಿಯನ್ನು 6 ತಿಂಗಳಲ್ಲಿ ಸರಕಾರಕ್ಕೆ ಹಸ್ತಾಂತರಿಸುವಂತೆ ಸೂಚನೆ ನೀಡಿದ್ದಾರೆ.
 
ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿ ನಂತರ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಿಐಡಿ ಅಧಿಕಾರಿಗಳ ತನಿಖೆಯ ಮೇಲೆ ನಂಬಿಕೆ ಇದೆ. ಆದರೆ, ಪ್ರಕರಣವನ್ನು ಉನ್ನತ ಮಟ್ಟದಲ್ಲಿ ತನಿಖೆ ನಡೆಸುವ ದೃಷ್ಟಿಯಿಂದ ನ್ಯಾಯಾಂಗ ತನಿಖೆಗೆ ನೀಡುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.


ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರವೀಣ ಖಾಂಡ್ಯ ವಿರುದ್ಧ 32 ಪ್ರಕರಣಗಳಿವೆ: ಸಿಎಂ ಸಿದ್ದರಾಮಯ್ಯ