Webdunia - Bharat's app for daily news and videos

Install App

ಗಣಪತಿ ಆತ್ಮಹತ್ಯೆ ಪ್ರಕರಣ: ಸದನದಲ್ಲಿ ವಿವರಣೆ ನೀಡಿದ ಸಿಎಂ ಸಿದ್ದರಾಮಯ್ಯ

Webdunia
ಬುಧವಾರ, 13 ಜುಲೈ 2016 (17:56 IST)
ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸದನದಲ್ಲಿ ಉತ್ತರ ನೀಡಿದ್ದಾರೆ.
 
ವಿಧಾನಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೂಡ್ಗಿಗಿ ಡಿಎಸ್‌ಪಿಯಾಗಿದ್ದ ಅನುಪಮಾ ಶೆಣೈ ರಾಜೀನಾಮೆ, ಚಿಕ್ಕಮಗಳೂರು ಡಿವೈಎಸ್‌ಪಿ ಕಲ್ಲಪ್ಪ ಹಂಡಿಭಾಗ್ ಮತ್ತು ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಸಾವಿನಿಂದ ಪೊಲೀಸ್ ಇಲಾಖೆಗೆ ಭರಿಸಲಾಗದ ನಷ್ಟ ಸಂಭವಿಸಿದೆ. ದೇವರು ಅವರ ಕುಟುಂಬಕ್ಕೆ ದುಖ ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದರು. 
 
ರಾಜ್ಯದಲ್ಲಿ ಮಳೆ ಬೆಳೆ ಇಲ್ಲವೆಂದು ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ರಾಜ್ಯದಲ್ಲಿ ಯಾರು ಆತ್ಮಹತ್ಯೆಗೆ ಶರಣಾಗಬೇಡಿ. ಆತ್ಮಹತ್ಯೆಯೇ ಎಲ್ಲದ್ದಕ್ಕೂ ಪರಿಹಾರವಲ್ಲ. ಜೀವನದಲ್ಲಿ ಎಲ್ಲವನ್ನು ಎದುರಿಸಬೇಕಾಗುತ್ತದೆ. ನೊಂದವರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಬೇಕಾಗಿದೆ. ಬೀಸೋ ದೊಣ್ಣೆ ತಪ್ಪಿದರೆ ಸಾವಿರ ವರ್ಷ ಆಯುಷ್ಯ ಎಂದು ತಿಳಿಸಿದರು.
 
2008 ರ ಸಾಲಿನ ಚರ್ಚ್ ದಾಳಿ ಸಮಯದಲ್ಲಿ ಎಂ.ಕೆ.ಗಣಪತಿ ಅವರು ಉಲ್ಲಾಳ ಠಾಣೆಯಲ್ಲಿ ಇನ್‌ಸ್ಪೆಕ್ಟರ್ ಆಗಿದ್ದರು. ಇದಾದ 5 ವರ್ಷಗಳ ಬಳಿಕ ಕೆ.ಜೆ.ಜಾರ್ಜ್ ಮಂತ್ರಿಯಾಗಿದ್ದಾರೆ. 2013 ರಲ್ಲಿ ಮಂತ್ರಿಯಾದ ಬಳಿಕೆ ಜಾರ್ಜ್ ಅವರು ಮಂಗಳೂರಿಗೆ ತರಳಿ ದೇವಸ್ಥಾನ, ಚರ್ಚ್ ಮತ್ತು ಪೊಲೀಸ್ ಠಾಣೆಗೆ ಭೇಟಿ ನೀಡಿದ್ದರು. ಜಾರ್ಜ್ ಪೂರ್ವಾಗ್ರಹ ಪೀಡಿತರಾಗಿದ್ದರು ಎಂಬುವುದಕ್ಕೆ ಸಾಕ್ಷಿ ಬೇಕಲ್ಲವೆ ಎಂದು ಪ್ರಶ್ನಿಸಿದ್ದಾರೆ.
 
2007 ರ ಸಾಲಿನಲ್ಲಿ ಎಂ.ಕೆ.ಗಣಪತಿ ಇನ್ಸ್‌ಪೆಕ್ಟರ್ ಆಗಿ ಬಡ್ತಿ ಪಡೆದುಕೊಂಡಿದ್ದು, 2016 ರಲ್ಲಿ ಡಿವೈಎಸ್‌ಪಿ ಆಗಿ ಬಡ್ತಿ ಪಡೆದುಕೊಂಡಿದ್ದರು. ಆ ಸಂದರ್ಭದಲ್ಲಿ ಜಾರ್ಜ್ ಅವರು ಮಂತ್ರಿಯಾಗಿರುವುದು ಮರೆಯುವಂತಿಲ್ಲ ಎಂದರು.
 
ಎಂ.ಕೆ.ಗಣಪತಿ ಅವರು ಆತ್ಮಹತ್ಯೆಗೂ ಮುನ್ನ ಖಾಸಗಿ ವಾಹಿನಿಗೆ ಸಂದರ್ಶನ ನೀಡಿದ್ದು, ನನಗೇನಾದ್ರೂ ಆದ್ರೆ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಹಾಗೂ ಅಧಿಕಾರಿಗಳಾದ ಎಂ.ಎಂ.ಪ್ರಸಾದ್ ಮತ್ತು ಮೊಹಾಂತಿ ಅವರೇ ಕಾರಣ ಎಂದು ಹೇಳಿದ್ದರು. ಆದರೆ, ಗಣಪತಿ ಅವರು ಎಂ.ಎಂ.ಪ್ರಸಾದ್ ಅವರ ಕೈಕೆಳಗೆ ಕೆಲಸವೇ ನಿರ್ವಹಿಸಿಲ್ಲ. ಅವರು ಇವರಿಗೆ ಕಿರುಕುಳ ನೀಡಲು ಹೇಗೆ ಸಾಧ್ಯ. ಗಣಪತಿ ಅವರ ಆರೋಪ ಅಸಂಬದ್ಧ. ಸತ್ಯಕ್ಕೆ ದೂರವಾಗಿದೆ ಎಂದು ಹೇಳಿದರು. 
 
ಎಂ.ಕೆ.ಗಣಪತಿ ಅಧಿಕಾರಿಗಳ ಕಿರುಕುಳದ ಕುರಿತು ಯಾವತ್ತು ದೂರು ನೀಡಿಲ್ಲ. ಹಿರಿಯ ಅಧಿಕಾರಿಗಳು ಹಾಗೂ ಸರಕಾರದ ಗಮನಕ್ಕೂ ತಂದಿಲ್ಲ. ಗಣಪತಿ ಅವರು ನೀಡಿದ್ದು ಕೇವಲ ಸ್ಟೇಟ್‌ಮೆಂಟ್ ಹೊರತು ಅದು ಡೈಯಿಂಗ್ ಡಿಕ್ಲೇರೆಶನ್ ಅಲ್ಲ ಎಂದು ತಿಳಿಸಿದರು.
 
ಸರಕಾರದ ಹೇಳಿಕೆಯಿಂದ ಗಣಪತಿ ಪತ್ನಿ ಪಾವನಾ ಅವರಿಗೆ ಅವಮಾನ ಮಾಡಿದ್ದೇವೆ ಎಂದು ವಿಪಕ್ಷಗಳು ಆರೋಪಿಸುತ್ತಿವೆ. ಆದರೆ, ಈ ಹೇಳಿಕೆಯನ್ನು ಗಣಪತಿ ತಂದೆ ಕುಶಾಲಪ್ಪ ನೀಡಿದ್ದರು. ಈ ಹೇಳಿಕೆಯಿಂದ ಪಾವನಾ ಅವರ ಮನಸ್ಸಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ತಿಳಿಸಿದರು.
 
ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೊಳಗಾಗಿದ್ದ ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಹೈಕೋರ್ಟ್ ನಿವೃತ ನ್ಯಾಯಮೂರ್ತಿ ನೇತೃತ್ವದ ಸಮಿತಿಯನ್ನು ರಚಿಸಿ ನ್ಯಾಯಾಂಗ ತನಿಖೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಪಾಕ್‌ಗೆ ಸಹಾಯ ಮಾಡಿದ್ದಕ್ಕೆ ಟರ್ಕಿಗೆ ತಕ್ಕ ಉತ್ತರ ಕೊಟ್ಟ ಭಾರತ

ಭಯೋತ್ಪಾದಕರಿಗೆ ಪಾಠ ಕಲಿಸಲು ಅವರ ಸಹೋದರಿಯನ್ನು ಕಳುಹಿಸಿದೆವು: ಸೋಫಿಯಾ ಖುರೇಷಿ ವಿರುದ್ಧದ ವಿಜಯ್ ಶಾ ಹೇಳಿಕೆಗೆ ಆಕ್ರೋಶ

ಮೂಕ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಅರೋಪ, ನ್ಯಾಯಕ್ಕಾಗಿ ಶವವಿಟ್ಟು ಪ್ರತಿಭಟನೆ

ಅರುಣಾಚಲ ಪ್ರದೇಶದ ಮೇಲೆ ಹಕ್ಕು ಚಲಾಯಿಸಲು ಬಂದ ಚೀನಾಗೆ ಖಡಕ್‌ ಉತ್ತರ ಕೊಟ್ಟ ಭಾರತ

ಭಾರತದ ಮೇಲಿನ ದಾಳಿಗೆ ಪಾಕ್‌ಗೆ ಸಹಾಯ ಮಾಡಿದ ಟರ್ಕಿ, ಕಳುಹಿಸಿದ ಡ್ರೋನ್‌ಗಳ ಲೆಕ್ಕಾ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments