ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಮಡಿಕೇರಿ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಅನ್ನಪೂರ್ಣೇಶ್ವರಿ ಅವರು ಸಚಿವ ಕೆ.ಜೆ.ಜಾರ್ಜ್ ಸೇರಿದಂತೆ ಪ್ರೊನಬ್ ಮೊಹಂತಿ ಮತ್ತು ಎಂ.ಎಂ.ಪ್ರಸಾದ್ ಅವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಮಡಿಕೇರಿ ಟೌನ್ ಪೊಲೀಸರಿಗೆ ಸೂಚನೆ ನೀಡಿದ್ದರು.
ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ತುರ್ತು ಸಭೆ ಕರೆದಿದ್ದು, ಸಚಿವ ಕೆ.ಜೆ.ಜಾರ್ಜ್ ಅವರು ಮುಖ್ಯಮಂತ್ರಿ ಕಛೇರಿಗೆ ತೆರಳಿ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳಾದ ಪ್ರೊನಬ್ ಮೊಹಂತಿ ಹಾಗೂ ಎಂ.ಎಂ.ಪ್ರಸಾದ್ ಅವರಿಗೆ ಕಡ್ಡಾಯ ರಜೆ ಮೇಲೆ ತೆರಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆಗೆ ಶರಣಾಗುವ ಮುನ್ನ ಖಾಸಗಿ ಸುದ್ದಿ ವಾಹಿನಿಗೆ ಸಂದರ್ಶನ ನೀಡಿ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಸೇರಿದಂತೆ ಪ್ರೊನಬ್ ಮೊಹಾಂತಿ ಮತ್ತು ಎಂ.ಎಂ.ಪ್ರಸಾದ್ ಅವರು ತನಗೆ ಕಿರುಕುಳ ನೀಡುತ್ತಿದ್ದಾರೆ. ನನಗೆನಾದ್ರೂ ಆದ್ರೆ ಈ ಮೂವರೇ ಕಾರಣ ಎಂದು ಆರೋಪಿಸಿದ್ದರು.
ಎಂ.ಕೆ.ಗಣಪತಿ ಅವರ ಪುತ್ರ ನೇಹಾಲ್ ಮಡಿಕೇರಿ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಖಾಸಗಿ ದೂರನ್ನು ನೀಡಿದ್ದರು.
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ